5ನೇ ಹಂತದ ಲೋಕಸಮರ; ಮೇ 1ರಂದು ಪ್ರಧಾನಿ ಮೋದಿ ಅಯೋಧ್ಯೆಗೆ

Team Udayavani, Apr 25, 2019, 6:31 PM IST

ಅಯೋಧ್ಯಾ: ದೇಶದಲ್ಲಿ 5ನೇ ಹಂತದ ಲೋಕಸಭಾ ಚುನಾವಣೆ ನಡೆಯುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 1ರಂದು ಅಯೋಧ್ಯೆ ಸಮೀಪ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿ ತಿಳಿಸಿದೆ.

ಅಯೋಧ್ಯಾ ನಗರದಿಂದ 25 ಕಿಲೋ ಮೀಟರ್ ದೂರದ ಮಾಯಾ ಬಜಾರ್ ಸ್ಥಳದಿಂದ ಪ್ರಧಾನಿ ಮೋದಿ ಅವರ ರಾಲಿ ನಡೆಯಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಇಲ್ಲಿನ ಫೈಝಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಮೇ 6ರಂದು ಮತದಾನ ನಡೆಯಲಿದೆ. 2014ರಲ್ಲಿ ಪ್ರಧಾನಿ ಮೋದಿ ಅವರು ಅಧಿಕಾರಕ್ಕೇರಿದ ಬಳಿಕ ಮೊದಲ ಬಾರಿಗೆ ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ವರದಿ ಹೇಳಿದೆ.

2014ರಲ್ಲಿ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಫೈಝಾಬಾದ್ ನಲ್ಲಿ ಚುನಾವಣಾ ರಾಲಿಯನ್ನು ಉದ್ದೇಶಿಸಿ ಮಾತನಾಡಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ