ಕರ್ತಾರ್ಪುರ ಕಾರಿಡಾರ್ ನ.8ಕ್ಕೆ ಮೋದಿ ಚಾಲನೆ
Team Udayavani, Oct 13, 2019, 6:13 AM IST
ನವದೆಹಲಿ: ಬಹುನಿರೀಕ್ಷಿತ ಕರ್ತಾರ್ಪುರ ಕಾರಿಡಾರ್ ಅನ್ನು ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲು ಶನಿವಾರ ತಿಳಿಸಿದ್ದಾರೆ.
ಪಾಕಿಸ್ತಾನದ ಶ್ರೀ ಕರ್ತಾರ್ಪುರ ಸಾಹಿಬ್ಗ ಸಂಪರ್ಕ ಕಲ್ಪಿಸುವಂಥ ಕರ್ತಾರ್ಪುರ ಕಾರಿಡಾರ್ ಯೋಜನೆ ಪೂರ್ಣಗೊಂಡಿದ್ದು, ನ.8ರಂದು ಭಾರತದ ಗಡಿಯೊಳಗೆ ಬರುವಂಥ ಚೆಕ್ಪೋಸ್ಟ್ಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಕಳೆದ 72 ವರ್ಷಗಳಲ್ಲಿ ಕಾಂಗ್ರೆಸ್ ಮಾಡದ್ದನ್ನು ಮೋದಿ ನೇತೃತ್ವದ ಬಿಜೆಪಿ ಮಾಡಿ ತೋರಿಸಿದಂತಾಗುತ್ತದೆ ಎಂದು ಕೌರ್ ಟ್ವೀಟ್ ಮಾಡಿದ್ದಾರೆ.
ಕಳೆದ ವಾರ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಅವರು, ಕರ್ತಾರ್ಪುರ ಕಾರಿಡಾರ್ ಉದ್ಘಾಟನೆ ಹಾಗೂ ಗುರು ನಾನಕ್ ದೇವ್ ಅವರ 550ನೇ ಪ್ರಕಾಶ್ ಪರ್ವ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು. ಕಳೆದ ನವೆಂಬರ್ನಲ್ಲಿ ಕೈಗೊಂಡ ಪ್ರಮುಖ ನಿರ್ಧಾರವೆಂಬಂತೆ, ಕರ್ತಾರ್ಪುರ ಕಾರಿಡಾರ್ ನಿರ್ಮಾಣಕ್ಕೆ ಭಾರತ-ಪಾಕ್ ಒಪ್ಪಿಕೊಂಡಿದ್ದವು. ಈ ಕಾರಿಡಾರ್ ಪಂಜಾಬ್ನ ಗುರುದಾಸ್ಪುರ ಜಿಲ್ಲೆಯಲ್ಲಿರುವ ದೇರಾ ಬಾಬಾ ನಾನಕ್ ದೇಗುಲದಿಂದ ಕರ್ತಾರ್ಪುರದಲ್ಲಿರುವ ದರ್ಬಾರ್ ಸಾಹಿಬ್ಗ ಸಂಪರ್ಕ ಕಲ್ಪಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್