ಅಂಬೇಡ್ಕರ್ ಅವರ ನಿಜವಾದ ಅನುಯಾಯಿ ಮೋದಿ: ಕೋವಿಂದ್
Team Udayavani, Sep 16, 2022, 8:15 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ನಿಜವಾದ ಅನುಯಾಯಿಯಾಗಿದ್ದು, ಸಮಾಜ ಸುಧಾರಣೆಯ ಅವರ ದೃಷಿಕೋನವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದರು.
ಬ್ಲೂಕಾರ್ಟ್ ಡಿಜಿಟಲ್ ಫೌಂಡೇಷನ್ ಸಂಕಲಿಸಿರುವಂಥ “ಅಂಬೇಡ್ಕರ್ ಮತ್ತು ಮೋದಿ: ಸುಧಾರಕರ ಚಿಂತನೆಗಳು, ನಿರ್ವಾಹಕರ ಅನುಷ್ಠಾನ’ ಎಂಬ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಶಿಕ್ಷಣ, ಕಾರ್ಮಿಕ ಕಲ್ಯಾಣ, ಮಹಿಳಾ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ 370ನೇ ವಿಧಿ ರದ್ದುಗೊಳಿಸಿದ್ದು ಸೇರಿದಂತೆ ಸ್ವಾವಲಂಬಿ ದೇಶ ನಿರ್ಮಾಣ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಇದೇ ವೇಳೆ ಕೋವಿಂದ್ ಉಲ್ಲೇಖಿಸಿದರು.
“ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಬಾಬಾಸಾಹೇಬರು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಪ್ರಸ್ತಾವವನ್ನು ತಿರಸ್ಕರಿಸಿದ್ದರು. ಆದರೆ ನಂತರ ಬಂದ ಸರ್ಕಾರ ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿತು,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು