Speedy Recovery: ಕಿಂಗ್ ಚಾರ್ಲ್ಸ್ ಶೀಘ್ರ ಗುಣಮುಖರಾಗಲಿ… ಪ್ರಧಾನಿ ಮೋದಿ ಹಾರೈಕೆ
Team Udayavani, Feb 6, 2024, 1:18 PM IST
ನವದೆಹಲಿ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬ್ರಿಟನ್ ದೊರೆ 3ನೇ ಚಾರ್ಲ್ಸ್ ಶೀಘ್ರ ಗುಣಮುಖರಾಗಲಿ ಮತ್ತು ಉತ್ತಮ ಆರೋಗ್ಯವನ್ನು ಪಡೆಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹಾರೈಸಿದ್ದಾರೆ.
ಲಂಡನ್ನಲ್ಲಿರುವ ಬ್ರಿಟಿಷ್ ರಾಜಮನೆತನದ ಅಧಿಕೃತ ನಿವಾಸವಾದ ಬಕಿಂಗ್ಹ್ಯಾಮ್ ಪ್ಯಾಲೇಸ್ ಸೋಮವಾರ ನೀಡಿದ ಹೇಳಿಕೆಯಲ್ಲಿ ಚಾರ್ಲ್ಸ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು ಅಲ್ಲದೆ ಅವರಿಗೆ ಅರಮನೆಯಲ್ಲೇ ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವುದನ್ನು ದೃಢಪಡಿಸಿದ್ದಾರೆ ಇದರ ಬೆನ್ನಲ್ಲೇ ಸೋಮವಾರದಿಂದ ಅವರಿಗೆ ಚಿಕಿತ್ಸೆ ನೀಡಲು ವೈದ್ಯರು ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.
ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಚಾರ್ಲ್ಸ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅದರಂತೆ “ಕಿಂಗ್ ಚಾರ್ಲ್ಸ್ III ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯವನ್ನು ಬಯಸುವ ಭಾರತದ ಜನರೊಂದಿಗೆ ನಾನು ಕೂಡ ಸೇರುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.
I join the people of India in wishing speedy recovery and good health to His Majesty King Charles III. https://t.co/86mKg9lE1q
— Narendra Modi (@narendramodi) February 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ