ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಸುಧಾರಣೆ
Team Udayavani, Dec 29, 2022, 7:07 PM IST
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನ ಯು.ಎನ್.ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ಆರೋಗ್ಯ ಸ್ಥಿತಿ ಚೇತರಿಸಿಕೊಂಡಿದೆ.
ಪ್ರಧಾನಿ ಮೋದಿ ಅವರ ಅಣ್ಣ ಸೋಮ ಭಾಯಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ, ತಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾತನಾಡಿದ ಅವರು, ಗುರುವಾರ ಬೆಳಗ್ಗೆ ದ್ರವಾಹಾರ ಸೇವಿಸಿದ್ದರು. ಅವರ ಸ್ಥಿತಿ ಸುಧಾರಣೆಯಾಗುತ್ತಿದೆ ಎಂದು ಹೇಳಿದ್ದಾರೆ. ನಮ್ಮ ಜತೆಗೆ ಅವರು ಕೈ ಸನ್ನೆಯ ಮೂಲಕ ಮಾತನಾಡಿದ್ದಾರೆ. ಶೀಘ್ರವೇ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಬುಧವಾರ ಅವರಿಗೆ ಅನಾರೋಗ್ಯ ಉಂಟಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಆಗಮಿಸಿ, ತಾಯಿಯ ಆರೋಗ್ಯ ವಿಚಾರಿಸಿದ್ದರು. ಗಾಂಧಿನಗರದ ರಾಯಸಾನ್ ಗ್ರಾಮದಲ್ಲಿ ಪ್ರಧಾನಿ ಮೋದಿ ಅವರ ಕಿರಿಯ ಸಹೋದರ ಪಂಕಜ್ ಮೋದಿ ಜತೆಗೆ ಹೀರಾ ಬಾ ವಾಸಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ