ಮಹಿಳಾ ದಿನಾಚರಣೆ: ಪ್ರಧಾನಿ ಮೋದಿಯ ಟ್ವಿಟ್ಟರ್ ಖಾತೆಯನ್ನು ನಿಭಾಯಿಸಲಿರುವ ‘ನಾರಿ ಶಕ್ತಿ’ಯರು
Team Udayavani, Mar 8, 2020, 8:37 AM IST
ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಮಹಿಳಾ ಸಾಧಕರಿಗೆ ಇಂದು ತಮ್ಮ ಟ್ವಿಟ್ಟರ್ ಖಾತೆಯನ್ನು ನಿಭಾಯಿಸುವ ಅವಕಾಶವನ್ನೂ ನೀಡಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನಾರಿ ಶಕ್ತಿ ಪ್ರಶಸ್ತಿಗಳನ್ನು ನೀಡಿದ ನಂತರ ಪ್ರಧಾನಿ ಮೋದಿ ಅವರು ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಲಿದ್ದಾರೆ. ತದನಂತರದಲ್ಲಿ ಪ್ರಧಾನಿ ಮೋದಿಯವರ ಟ್ವಿಟ್ಟರ್ ಖಾತೆಯನ್ನು ಮಹಿಳಾ ಸಾಧಕರು ನಿರ್ವಹಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಶನಿವಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿತ್ತು.
ಮಾರ್ಚ್ 3ರಂದೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರನ್ನು ಪ್ರೇರೇಪಿಸಲು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿರುವ ತಮ್ಮ ಖಾತೆಗಳನ್ನು ನಿಭಾಯಿಸಲು ಅವಕಾಶ ಮಾಡಿಕೊಡುವುದಾಗಿ ಪ್ರಧಾನಿ ಘೋಷಿಸಿದ್ದರು.
ಫೇಸ್ ಬುಕ್‌ನಲ್ಲಿ 44 ಮಿಲಿಯನ್. ಟ್ವಿಟರ್ ನಲ್ಲಿ 53 ಮಿಲಿಯನ್ ಮತ್ತು ಇನ್ ಸ್ಟಾಗ್ರಾಂ ನಲ್ಲಿ 35.2 ಮಿಲಿಯನ್ ಗಿಂತಲೂ ಹೆಚ್ಚು ಫಾಲೋವರ್ಸ್ ಗಳನ್ನು ಹಾಗೂ ಯುಟ್ಯೂಬ್‌ನಲ್ಲಿ 4.5 ಮಿಲಿಯನ್ ಸಬ್ ಸ್ಕ್ರೈಬರ್ಸ್ ಅನ್ನು ಪ್ರಧಾನಿ ಮೋದಿ ಹೊಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಅತೀ ಹೆಚ್ಚು ಫಾಲೋಯಿಂಗ್ ಮಾಡುವ ರಾಜಕಾರಣಿಗಳಲ್ಲಿ ಒಬ್ಬರು ಎಂದು ಪ್ರಧಾನಿ ಗುರುತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ