ಉದ್ಯಮಿ ನೀರವ್ ಮೋದಿ ದೇಶಭ್ರಷ್ಟ ಆರ್ಥಿಕ ಅಪರಾಧಿ; ಪಿಎಂಎಲ್ ಎ ಕೋರ್ಟ್ ಘೋಷಣೆ

Team Udayavani, Dec 5, 2019, 5:51 PM IST

ಮುಂಬೈ: ಪಂಜಾಬ್ ನ್ಯಾಶನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯನ್ನಿ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಅಕ್ರಮ ಹಣ ವರ್ಗಾವಣೆ ನಿಗ್ರಹ ವಿಶೇಷ (ಪಿಎಂಎಲ್ ಎ) ಕೋರ್ಟ್ ಗುರುವಾರ ಘೋಷಿಸಿದೆ.

ಮದ್ಯದ ದೊರೆ ವಿಜಯ್ ಮಲ್ಯ ನಂತರ ನೀರವ್ ಮೋದಿ 2ನೇ ದೇಶಭ್ರಷ್ಟ ಆರ್ಥಿಕ ಅಪರಾಧಿಯಾಗಿರುವುದಾಗಿ ವರದಿ ತಿಳಿಸಿದೆ. ಕಳೆದ ಮಾರ್ಚ್ ನಲ್ಲಿ ಲಂಡನ್ ನಲ್ಲಿ ನೀರವ್ ಮೋದಿಯನ್ನು ಬಂಧಿಸಿದ್ದರು. ಪ್ರಸ್ತುತ ನೀರವ್ ಲಂಡನ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವುದಾಗಿ ವರದಿ ವಿವರಿಸಿದೆ.

ನೀರವ್ ಮೋದಿಯನ್ನು ಲಂಡನ್ ನಿಂದ ಭಾರತಕ್ಕೆ ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ವಿವಾದಿತ ಉದ್ಯಮಿ ವಿಜಯ್ ಮಲ್ಯನನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಬೇಕೆಂದು ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಪಿಎಂಎಲ್ ಎ ವಿಶೇಷ ಕೋರ್ಟ್ ಮಾನ್ಯ ನೀಡಿ ದೇಶಭ್ರಷ್ಟ ಅಪರಾಧಿ ಎಂದು ಘೋಷಿಸಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ