ಎನ್ ಕೌಂಟರ್: ದಿಲ್ಲಿಯಲ್ಲಿ ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ ಪೊಲೀಸರು

Team Udayavani, Feb 17, 2020, 9:15 AM IST

ಹೊಸದಿಲ್ಲಿ: ಇಂದು ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ.

ಇಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ದಿಲ್ಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು, ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಹತ್ಯೆಯಾದವರು.

ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದೆ. ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ.

ವರದಿಯ ಪ್ರಕಾರ, ಪೊಲೀಸರು ಮತ್ತು ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರಡೂ ಕಡೆಗಳಿಂದ ಒಟ್ಟು 30 ಸುತ್ತು ಗುಂಡಿನ ದಾಳಿಯಾಗಿದೆ ಎನ್ನಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ