J&K ; ಕ್ರಿಕೆಟ್ ಆಡುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಉಗ್ರನಿಂದ ಗುಂಡಿನ ದಾಳಿ
Team Udayavani, Oct 29, 2023, 8:20 PM IST
ಶ್ರೀನಗರ: ಉಗ್ರನೊಬ್ಬ ಗುಂಡು ಹಾರಿಸಿದ ಪರಿಣಾಮ ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ಇನ್ಸ್ಪೆಕ್ಟರ್ ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶ್ರೀನಗರ ಡೌನ್ಟೌನ್ನಲ್ಲಿ ಭಾನುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಯನ್ನು ಮಸ್ರೂರ್ ಅಹ್ಮದ್ ವಾನಿ ಎಂದು ಗುರುತಿಸಲಾಗಿದ್ದು, ಈದ್ಗಾ ಆಟದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಏಕಾಂಗಿಯಾಗಿ ಬಂದ ಉಗ್ರ ಸಮೀಪದಿಂದ ಕಣ್ಣು, ಹೊಟ್ಟೆ ಮತ್ತು ಕೈಗೆ ಮೂರು ಗುಂಡುಗಳನ್ನು ಹಾರಿಸಿ ಪರಾರಿಯಾಗಿದ್ದಾನೆ.
ಈದ್ಗಾ ಮೈದಾನದಲ್ಲಿ ಸಾಮಾನ್ಯವಾಗಿ ಭಾನುವಾರ ಕ್ರಿಕೆಟ್ ಆಡುವ ಯುವಕರಿಂದ ತುಂಬಿರುತ್ತದೆ. ವಾನಿಯ ತಂಡದ ಸದಸ್ಯರು ಉಗ್ರನ ಹಿಂದೆ ಓಡಿದರು ಆದರೆ ಆತ ಗಾಳಿಯಲ್ಲಿ ಗುಂಡು ಹಾರಿಸಿ ಪಲಾಯನ ಗೈಯುವಲ್ಲಿ ಯಶಸ್ವಿಯಾಗಿದ್ದಾನೆ.
ವಾನಿ ಅವರನ್ನು ಸೌರಾದ ಆಸ್ಪತ್ರೆಗೆ ಸಾಗಿಸಲಾಗಿದ್ದು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ದಾಳಿ ನಡೆಸಿದ ಉಗ್ರನ ಬಗ್ಗೆ ಕೆಲ ಸುಳಿವು ಸಿಕ್ಕಿದ್ದು, ಆತನ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ