ಬಿಜೆಪಿ ಜತೆಗೆ ಮೈತ್ರಿ ಬದಲು ರಾಜಕೀಯ ನಿವೃತ್ತಿ: ಮಾಯಾವತಿ
Team Udayavani, Nov 3, 2020, 2:50 AM IST
ಲಕ್ನೋ: ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದರ ಬದಲಾಗಿ, ರಾಜಕೀಯ ನಿವೃತ್ತಿ ಪಡೆಯುವೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಸೋಮವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಶೀಘ್ರವೇ ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೂ ಬೆಂಬಲಿಸಲು ಸಿದ್ಧ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಬಿಎಸ್ಪಿ ನಾಯಕಿ ಉಲ್ಟಾ ಹೊಡೆದಿದ್ದಾರೆ. ಮುಸ್ಲಿಂ ಸಮುದಾಯದಕ್ಕೆ ಗೊಂದಲ ಮೂಡಿಸಲು ತಮ್ಮ ಹೇಳಿಕೆಯನ್ನು ಕಾಂಗ್ರೆಸ್, ಸಮಾಜವಾದಿ ಪಕ್ಷ ದುರುಪಯೋಗ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ಸರಕಾರ 2003ರಲ್ಲಿ ತಮ್ಮ ವಿರುದ್ಧ ಸುಳ್ಳು ಕೇಸು ದಾಖಲಿಸಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮಗೆ ಫೋನ್ ಮಾಡಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅನ್ಯಾಯ ಸರಿಪಡಿಸುವುದಾಗಿ ಹೇಳಿ ದ್ದರು. ಆದರೆ ಅದು ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ ಎಂದೂ ಮಾಯಾವತಿ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ