ಮೂರು ಗಂಟೆಗಳಲ್ಲಿ ಪೋಸ್ಟ್ ಡಿಲೀಟ್!
Team Udayavani, Mar 22, 2019, 12:30 AM IST
ಹೊಸದಿಲ್ಲಿ: ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಪ್ರಕಟಿಸಿದಲ್ಲಿ ಅದನ್ನು ತ್ವರಿತವಾಗಿ ವಿಶ್ಲೇಷಿಸಿ ತೆಗೆದುಹಾಕುವ ಪ್ರಕ್ರಿಯೆಗೆ ಸೋಷಿಯಲ್ ಮೀಡಿಯಾ ಸಂಸ್ಥೆಗಳು ಜಾರಿಗೊಳಿಸಿವೆ.
ಮತದಾನಕ್ಕೂ ಮೊದಲಿನ 48 ಗಂಟೆಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ವಿಷಯಗಳನ್ನು ಮೂರು ಗಂಟೆಗಳಲ್ಲಿ ಪರಿಶೀಲಿಸಿ ತೆಗೆದುಹಾಕಲಾಗುತ್ತದೆ. ಜಾಲತಾಣಗಳಲ್ಲಿನ ಮಾಹಿತಿ ಅಪ್ಲೋಡ್, ಶೇರಿಂಗ್ ಬಗ್ಗೆ ನಿಯಂತ್ರಣ ಹೇರಬೇಕು ಎಂಬ ಸೂಚನೆ ಹಿನ್ನೆಲೆಯಲ್ಲಿ ಫೇಸ್ಬುಕ್, ವಾಟ್ಸ್ ಆ್ಯಪ್, ಟ್ವಿಟರ್, ಗೂಗಲ್, ಶೇರ್ ಚಾಟ್, ಟಿಕ್ಟಾಕ್ ಸೇರಿದಂತೆ ಇತರ ಸೋಷಿಯಲ್ ಮೀಡಿಯಾ ಸಂಸ್ಥೆಗಳು ಈ ನಿರ್ಧಾರ ಪ್ರಕಟಿಸಿವೆ.
ಆಕ್ಷೇಪಾರ್ಹ ಕಂಟೆಂಟ್ ಕಂಡು ಬಂದಲ್ಲಿ ಇದರ ಬಗ್ಗೆ ಚುನಾವಣಾ ಆಯೋಗ ಸಂಬಂಧಿತ ಸೋಷಿಯಲ್ ಮೀಡಿಯಾ ಸಂಸ್ಥೆಗಳಿಗೆ ಸೂಚನೆ ನೀಡಲಿದೆ. ಇದನ್ನು ಮೂರು ಗಂಟೆಗಳಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ಸೋಷಿಯಲ್ ಮೀಡಿಯಾಗಳಿಗೆ 48 ಗಂಟೆಗಳಲ್ಲಿ ಮಾಧ್ಯಮಗಳಿಗೆ ವಿಧಿಸಿದಂತಹ ನೀತಿ ಸಂಹಿತೆಯನ್ನೇ ಜಾರಿಗೊಳಿಸಬೇಕು ಎಂಬ ಆಗ್ರಹ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ನೀತಿ ಸಂಹಿತೆಯನ್ನು ಪ್ರತ್ಯೇಕವಾಗಿ ರೂಪಿಸಲಾಗಿದ್ದು, ಇದಕ್ಕೆ ಎಲ್ಲ ಸೋಷಿಯಲ್ ಮೀಡಿಯಾ ವೆಬ್ಸೈಟ್ಗಳು ಚುನಾವಣೆಯಲ್ಲಿ ಪಾರ ದರ್ಶಕತೆ ಪಕ್ಷಪಾತತ ನದಿಂದ ಬದ್ಧವಾಗಬೇಕಿದೆ. ಇನ್ನೊಂ ದೆಡೆ ಜಾಹೀರಾತುಗಳಿಗೆ ಸಂಬಂಧಿಸಿ ದಂತೆ ಈಗಾಗಲೇ ಕಠಿಣ ನೀತಿಯನ್ನು ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ