ಪರಕೀಯ ಮಹಿಳೆಗೆ ಜನಿಸಿದ ಮಗ ದೇಶಭಕ್ತನಾಗಲು ಸಾಧ್ಯವಿಲ್ಲ; ರಾಹುಲ್ ಗೆ ಪ್ರಜ್ಞಾ ಠಾಕೂರ್ ಟೀಕೆ
Team Udayavani, Mar 12, 2023, 9:16 AM IST
ಹೊಸದಿಲ್ಲಿ: ಭಾರತೀಯ ಜನತಾ ಪಾರ್ಟಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ. “ಪರಕೀಯ ಮಹಿಳೆಗೆ ಜನಿಸಿದ ಮಗ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ ಎಂಬ ಚಾಣಕ್ಯನ ಮಾತುಗಳನ್ನು “ಸಾಬೀತುಪಡಿಸಿದ್ದಾರೆ” ಎಂದು ಟೀಕಿಸಿದ್ದಾರೆ.
ಅಲ್ಲದೆ ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ನೀಡಿದ ಕೆಲವು ಹೇಳಿಕೆಗಳಿಗಾಗಿ ಅವರನ್ನು ದೇಶದಿಂದ ಹೊರಹಾಕಬೇಕು ಎಂದು ಠಾಕೂರ್ ಹೇಳಿದರು.
ಲೋಕಸಭೆಯಲ್ಲಿ ಮೈಕ್ ಗಳು ಪ್ರತಿಪಕ್ಷಗಳು ಮಾತನಾಡುವ ವೇಳೆ ಹೆಚ್ಚಾಗಿ ಮೌನವಾಗಿರುತ್ತವೆ ಎಂದು ರಾಹುಲ್ ಲಂಡನ್ ನಲ್ಲಿ ಬ್ರಿಟಿಷ್ ಸಂಸದರಿಗೆ ಹೇಳಿದ್ದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ ಎಂದು ಅವರು ಟೀಕಿಸಿದ್ದರು.
“ನಿಮ್ಮ ತಾಯಿ (ಸೋನಿಯಾ ಗಾಂಧಿ) ಇಟಲಿಯಿಂದ ಬಂದವರಾಗಿರುವುದರಿಂದ ನೀವು ಭಾರತದವರಲ್ಲ ಎಂದು ನಾವು ಭಾವಿಸಿದ್ದೇವೆ” ಎಂದು ಸಾಧ್ವಿ ಪ್ರಜ್ಞಾ ಹೇಳಿದರು.
“ಸಂಸತ್ತು ಸುಗಮವಾಗಿ ನಡೆದರೆ ಹೆಚ್ಚಿನ ಕೆಲಸಗಳು ನಡೆಯುತ್ತವೆ. ಹೆಚ್ಚು ಕೆಲಸವಿದ್ದರೆ ಕಾಂಗ್ರೆಸ್ ನವರಿಗೆ ಉಳಿಗಾಲವಿಲ್ಲ. ಕಾಂಗ್ರೆಸ್ ಅಸ್ತಿತ್ವ ಕೊನೆಗೊಳ್ಳುವ ಹಂತದಲ್ಲಿದೆ. ಈಗ ಅವರ ಮನಸ್ಸು ಕೂಡ ಭ್ರಷ್ಟವಾಗುತ್ತಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ