ದೇಶಾದ್ಯಂತ ಸಿನಿಮಾ, ಟಿ.ವಿ ಚಿತ್ರಿಕರಣಕ್ಕೆ ಅನುಮತಿ: ಮಾರ್ಗಸೂಚಿ ಬಿಡುಗಡೆ


Team Udayavani, Aug 23, 2020, 4:53 PM IST

prakash-javadekar

ನವದೆಹಲಿ: ಸಿನಿಮಾ ಹಾಗೂ ಟಿ.ವಿ. ಕಾರ್ಯಕ್ರಮಗಳ ಚಿತ್ರೀಕರಣಕ್ಕಾಗಿ ಪ್ರಮಾಣಿಕೃತ ನಿರ್ವಹಣಾ ಕಾರ್ಯವಿಧಾನ ಮಾರ್ಗಸೂಚಿಯನ್ನು (ಎಸ್​ಒಪಿ) ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್  ಬಿಡುಗಡೆ ಮಾಡಿದ್ದಾರೆ.

ಇದರ ಪ್ರಕಾರ ದೇಶಾದ್ಯಂತ ಸಿನಿಮಾ ಹಾಗೂ ಟಿ.ವಿ ಚಿತ್ರಿಕರಣಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ. ಆರೋಗ್ಯ ಇಲಾಖೆ ಹಾಗೂ ಗೃಹ ಸಚಿವಾಲಯದೊಂದಿಗಿನ ಚರ್ಚೆ ಬಳಿಕ ಈ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸಲಾಗಿದ್ದು ಅಗತ್ಯ ಆರೋಗ್ಯ ಸುರಕ್ಷತಾ ಕ್ರಮಗಳೊಂದಿಗೆ ಸಿನಿಮಾ ಹಾಗೂ ಟಿ.ವಿ. ಕಾರ್ಯಕ್ರಮಗಳ ಚಿತ್ರೀಕರಣವನ್ನು ಆರಂಭಿಸಬಹುದು ಎಂದು ಜಾವಡೇಕರ್ ತಿಳಿಸಿದ್ದಾರೆ.

ಕಳೆದ 6 ತಿಂಗಳಿನಿಂದ ಸಿನಿಮಾ ಸೇರಿದಂತೆ ಟಿ.ವಿ ಕಾರ್ಯಕ್ರಮಗಳ ಚಿತ್ರಿಕರಣ ಸ್ಥಗಿತವಾಗಿತ್ತು. ಅದಾಗ್ಯೂ ಕೆಲವೊಂದು ರಾಜ್ಯಗಳಲ್ಲಿ ಕಳೆದೊಂದು ತಿಂಗಳಿನಿಂದ ಪ್ರಾಥಮಿಕ ಅನುಮತಿ ನೀಡಲಾಗಿತ್ತು. ಆದರೇ ಇಂದಿನಿಂದ ದೇಶಾದ್ಯಂತ ಚಿತ್ರಿಕರಣಕ್ಕೆ ಇರುವ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಈ ನಿರ್ಧಾರವನ್ನು ಚಿತ್ರಮಂಡಳಿ ಸ್ವಾಗತಿಸಿದ್ದು, ಆರ್ಥಿಕ ಚೇತರಿಕೆಯಲ್ಲೂ ಈ ನಿರ್ಧಾರ ಪ್ರಮುಖವಾಗಲಿದೆ ಎಂದಿದ್ದಾರೆ.

ಕಳೆದ 5-6 ತಿಂಗಳಿನಿಂದ ಚಿತ್ರರಂಗದ ಹಲವರು ನಿರುದ್ಯೋಗಿಗಳಾಗಿದ್ದರು. ಈ ಎಲ್ಲಾ ಕಾರಣಗಳಿಂದ ಸಿನಿಮಾ ಪ್ರೊಡಕ್ಷನ್ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಸ್ಥಳಗಳಲ್ಲಿ ಚಿತ್ರಿಕರಣ ನಡೆಸುವಾಗ ಫೇಸ್ ಮಾಸ್ಕ್ ಕಡ್ಡಾಯವಾಗಿರುತ್ತದೆ(ಕ್ಯಾಮಾರ ಎದುರಿಸುವ ಕಲಾವಿದರು ಹೊರತುಪಡಿಸಿ).  ಆರೋಗ್ಯ ಸೇತು ಆ್ಯಪ್ ಅಳವಡಿಸಿಕೊಳ್ಳುವಂತೆ ಸಲಹೆ, ಪ್ರತಿದಿನ ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು. ಅಂತರ ಕಾಯ್ದುಕೊಳ್ಳಬೇಕು, ಶಂಕಿತ ಕೋವಿಡ್ ಕಾಣಿಸಿಕೊಂಡರೇ ಐಶೋಲೇಶನ್ ನಲ್ಲಿರಬೇಕು.

ಚಿತ್ರಿಕರಣ ಸೆಟ್ ಗಳಿಗೆ ಯಾವುದೇ ಸಾರ್ವಜನಿಕರಿಗೆ ಪ್ರವೇಶ ನೀಡಬಾರದು, ಮೇಕಪ್ ರೂಂ, ಚಿತ್ರಿಕರಣ ಸ್ಥಳ, ಶೌಚಾಲಯ ಸೇರಿದಂತೆ ಇತರ ಪ್ರದೇಶಗಳನ್ನು ಸ್ಯಾನಿಟೈಸ್ ಮಾಡುವುದು ಕಡ್ಡಾಯ ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ನೀಡಲಾಗಿದೆ.

ಟಾಪ್ ನ್ಯೂಸ್

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

1-asdsadsa

Kuwait ಅಗ್ನಿ ದುರಂತ; ಸಂತ್ರಸ್ತ ಕುಟುಂಬಗಳಿಗೆ ಸಂಪೂರ್ಣ ನೆರವು: NBTC MD

MB Patil 2

Development ದೃಷ್ಟಿಯಿಂದ ಪೆಟ್ರೋಲ್-ಡಿಸೇಲ್ ದರ ಏರಿಕೆ: ಎಂ.ಬಿ.ಪಾಟೀಲ್

1-sadadasd

Yadgir: ರೀಲ್ಸ್ ಮಾಡಿದ ಯುವಕನಿಗೆ ಜೀವ ಬೆದರಿಕೆ ಹಾಕಿದ ಡಿ.ಬಾಸ್ ಸಂಘದ ಜಿಲ್ಲಾಧ್ಯಕ್ಷ!

1-sad-sada

Renuka Swamy ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsadsa

Kuwait ಅಗ್ನಿ ದುರಂತ; ಸಂತ್ರಸ್ತ ಕುಟುಂಬಗಳಿಗೆ ಸಂಪೂರ್ಣ ನೆರವು: NBTC MD

Water Supply

Delhi: ಮಾನವೀಯತೆಯಿಂದ ನೀರು ಬಿಡಲು ಹರಿಯಾಣಕ್ಕೆ ಎಎಪಿ ಸರಕಾರ ಒತ್ತಾಯ

crime (2)

Surat; ಅಪಾರ್ಟ್‌ಮೆಂಟ್‌ನಲ್ಲಿ ನಿಗೂಢವಾಗಿ ಒಂದೇ ಕುಟುಂಬದ ನಾಲ್ವರ ಶವಗಳು ಪತ್ತೆ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

7

Uttarakhand: ಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 12 ಮಂದಿ ದುರ್ಮರಣ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

1-ewewe

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧವಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.