ಪ್ರಶಾಂತ್‌ ಕನೋಜಿಯಾಗೆ ಜಾಮೀನು

Team Udayavani, Jun 12, 2019, 6:10 AM IST

ಹೊಸದಿಲ್ಲಿ: ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ದಿಲ್ಲಿಯ ಪತ್ರಕರ್ತ ಪ್ರಶಾಂತ್‌ ಕನೋಜಿಯಾ ಅವರಿಗೆ ಸುಪ್ರೀಂ ಕೋರ್ಟ್‌, ಮಂಗಳವಾರ ಜಾಮೀನು ನೀಡಿದೆ.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಇಂದಿರಾ ಬ್ಯಾನರ್ಜಿ, ನ್ಯಾ. ಅಜಯ್‌ ರಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠ, ಪ್ರಶಾಂತ್‌ ಅವರ ಟ್ವೀಟ್‌ಗಳನ್ನು ನ್ಯಾಯಪೀಠ ಗಮನಿಸಿದ್ದು, ಅವು ಆಕ್ಷೇಪಾರ್ಹ ಎಂದೂ ತಿಳಿದುಬಂದಿದೆ. ಹಾಗಿದ್ದರೂ ಅವರನ್ನು ಬಂಧಿ ಸಿರುವ ಕ್ರಮ ಸಂವಿಧಾನವು ನಾಗರಿಕರಿಗೆ ಕಲ್ಪಿಸಿರುವ ಸ್ವಾತಂತ್ರ್ಯದ ಹಕ್ಕಿನ ಚ್ಯುತಿ ಎಂದು ನ್ಯಾಯಪೀಠ ಅಭಿಪ್ರಾಯಪಡುತ್ತದೆ. ಈ ಹಕ್ಕಿನಲ್ಲಿ ಎಂದೂ ಹೊಂದಾಣಿಕೆ ಸಾಧ್ಯವಿಲ್ಲ.

ಹಾಗಾಗಿ, ಈ ಕೂಡಲೇ ಪತ್ರಕರ್ತ ಪ್ರಶಾಂತ್‌ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಸ್ಪಷ್ಟವಾಗಿ ಸೂಚಿಸಿತು.

ಯೋಗಿ ಆದಿತ್ಯನಾಥ್‌ ಅವರಿಗೆ ಮದುವೆ ಪ್ರಸ್ತಾವ ಕಳುಹಿಸಿರುವುದಾಗಿ ಮಹಿಳೆಯೊಬ್ಬರು ಹೇಳಿರುವ ವಿಡಿಯೋವನ್ನು ಪ್ರಶಾಂತ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಕ್ಕೆ ಬಂಧಿಸಲಾಗಿತ್ತು. ಪ್ರಶಾಂತ್‌ ಪತ್ನಿ ಜಾಗಿಶಾ ಅರೋರಾ, ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಜಾಗಿಶಾ, “ಸುಪ್ರೀಂ ಕೋರ್ಟ್‌ನ ನಿರ್ಧಾರ, ಸಂವಿಧಾನದ ಮೇಲಿನ ನನ್ನ‌ ನಂಬಿಕೆಯನ್ನು ಮತ್ತಷ್ಟು ದೃಢಗೊಳಿಸಿದೆ’ ಎಂದಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ