ಪ್ರಶಾಂತ್ ಕಿಶೋರ್ ರಾಜಕೀಯಕ್ಕೆ?
Team Udayavani, Sep 10, 2018, 2:15 AM IST
ಪಾಟ್ನಾ: ಸುಮಾರು 6 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ಗೆ ಚುನಾವಣಾ ಕಾರ್ಯತಂತ್ರಗಾರರಾಗಿ ಕಾರ್ಯನಿರ್ವಹಿಸಿ, ಚಾಣಕ್ಯ ಎನಿಸಿಕೊಂಡಿರುವ ಪ್ರಶಾಂತ್ ಕಿಶೋರ್ ಅವರು ಈಗ ತಾವೇ ಚುನಾವಣಾ ರಾಜಕೀಯಕ್ಕೆ ಧುಮುಕಲು ನಿರ್ಧರಿಸಿದ್ದಾರೆ.
ಹೈದರಾಬಾದ್ನ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ನ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಸ್ವತಃ ಪ್ರಶಾಂತ್ ಕಿಶೋರ್ ಅವರೇ ಈ ವಿಚಾರ ಬಹಿರಂಗಪಡಿಸಿದ್ದಾರೆ. ಆದರೆ, ತಾವು ಯಾವ ರಾಜಕೀಯ ಪಕ್ಷವನ್ನು ಸೇರುತ್ತೇನೆ ಎಂಬುದನ್ನು ಅವರು ಗುಟ್ಟಾಗಿಯೇ ಇಟ್ಟಿದ್ದಾರೆ. ಆದರೂ, ನಿತೀಶ್ ಕುಮಾರ್ ಅವರ ಜೆಡಿಯು ಸೇರ್ಪಡೆಗೊಳ್ಳುವ ಸುಳಿವು ನೀಡಿದ್ದಾರೆ ಎನ್ನಲಾಗಿದೆ. 2015ರಲ್ಲಿ ಬಿಹಾರದಲ್ಲಿ ಮಹಾಮೈತ್ರಿಕೂಟ ಅಸ್ತಿತ್ವಕ್ಕೆ ಬಂದ ನಂತರದಿಂದ ನಿತೀಶ್ ಜತೆಗಿನ ಪ್ರಶಾಂತ್ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.
2014ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಸ್ಟ್ರ್ಯಾಟಜಿಸ್ಟ್ ಆಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಬಿಜೆಪಿಯಿಂದ ದೂರ ಹೋಗಿ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳಿಗೆ ಕಾರ್ಯ ತಂತ್ರ ರೂಪಿಸುವ ಕೆಲಸದಲ್ಲಿ ನಿರತರಾಗಿದ್ದರು. ಇದೀಗ ಅವರೇ ರಾಜಕೀಯ ಸೇರಲು ನಿರ್ಧರಿಸಿರುವುದು ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…