2024ರಲ್ಲೂ ಜಯ ನಮ್ಮದೇ: ಬಿಜೆಪಿ ಸಂಸ್ಥಾಪನ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ Narendra Modi


Team Udayavani, Apr 7, 2023, 6:40 AM IST

2024ರಲ್ಲೂ ಜಯ ನಮ್ಮದೇ: ಬಿಜೆಪಿ ಸಂಸ್ಥಾಪನ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ Narendra Modi

ಹೊಸದಿಲ್ಲಿ: ಬಿಜೆಪಿಯ 44ನೇ ಸಂಸ್ಥಾಪನ ದಿನಾ  ಚರಣೆಯ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಯವರು 2024ರ ಲೋಕಸಭೆ ಚುನಾವಣ ಕಹಳೆ ಮೊಳಗಿಸಿದ್ದಾರೆ.

2024ರಲ್ಲಿ ಬಿಜೆಪಿಯನ್ನು ಸೋಲಿ ಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಈಗಾಗಲೇ ಜನರು ಹೇಳಲು ಶುರು ಮಾಡಿಕೊಂಡಿದ್ದಾರೆ. ಅದು ನಿಜ, ಮುಂದಿನ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ. ಹಾಗಂತ, ನಾವು ಮೈಮರೆಯುವಂತಿಲ್ಲ. ಬಿಜೆಪಿ ಕಾರ್ಯಕರ್ತರಾದ ನಾವೆ ಲ್ಲರೂ ಚುನಾವಣೆಯ ಜತೆಗೆ ದೇಶದ ಪ್ರತಿಯೊಬ್ಬ ನಾಗರಿಕನ ಹೃದಯ ವನ್ನೂ ಗೆಲ್ಲಬೇಕು ಎಂದು ಮೋದಿ ಕರೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ವಿಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ವಿಪಕ್ಷ ಗಳು ಇನ್ನೂ ಜೀತಪದ್ಧತಿಯ ಮನಃ ಸ್ಥಿತಿ ಯಿಂದ ಹೊರಬಂದಿಲ್ಲ. ಬಡವರು ಮತ್ತು ಹಿಂದುಳಿದ ವರ್ಗಗಳನ್ನು ಅವಮಾನ ಮಾಡುವುದರಲ್ಲೇ ನಿರತವಾಗಿದೆ ಎಂದೂ ಆರೋಪಿಸಿದ್ದಾರೆ.

ಹನುಮಾನ್‌ ಸ್ಮರಣೆ
ಹನುಮಾನ್‌ ಜಯಂತಿಯ ದಿನವಾದ ಗುರುವಾರವೇ ಬಿಜೆಪಿಯ ಸ್ಥಾಪನ ದಿನಾಚರಣೆ ನಡೆದ ಕಾರಣ, ಮೋದಿ ತಮ್ಮ ಭಾಷಣದಲ್ಲಿ ಹಲವು ಬಾರಿ ಆಂಜನೇಯನನ್ನು ಸ್ಮರಿಸಿದ್ದು ಕಂಡುಬಂತು. ಬಿಜೆಪಿಯು ಭ್ರಷ್ಟಾ ಚಾರ, ಸ್ವಜನ ಪಕ್ಷಪಾತ ಮತ್ತು ದೇಶದ ಕಾನೂನು ಸುವ್ಯವಸ್ಥೆ ಸಮಸ್ಯೆಯ ವಿರುದ್ಧ ಹೋರಾಡಲು ಬದ್ಧವಾಗಿದೆ.

ನಾವು ಹನುಮಾನ್‌ನಿಂದ ಸ್ಫೂರ್ತಿ ಪಡೆದವರು. ಇಂದಿನ ಭಾರತವು, ಹನುಮಾನನಂತೆ ಸವಾಲುಗಳ ವಿರುದ್ಧ ಹೋರಾಡುವುದಕ್ಕೆ ಸಜ್ಜಾಗಿದೆ ಎಂದೂ ಅವರು ಹೇಳಿದ್ದಾರೆ.
2014ರಲ್ಲಿ ಮೊತ್ತಮೊದಲ ಬಾರಿಗೆ ಪೂರ್ಣ ಬಹುಮತದಿಂದ ಬಿಜೆಪಿ ಅಧಿ ಕಾರಕ್ಕೆ ಬರುವ ಮೂಲಕ 800 ವರ್ಷಗಳ ಗುಲಾಮಗಿರಿಗೆ ಅಂತ್ಯಹಾಡಿತು ಎಂದೂ ನುಡಿದಿದ್ದಾರೆ. ಇದೇ ವೇಳೆ ಅವರು ಕಾಂಗ್ರೆಸ್‌ ಮತ್ತದರ ಮಿತ್ರಪಕ್ಷಗಳ ಸಂಕುಚಿತ ಮನಃಸ್ಥಿತಿ, ಭ್ರಷ್ಟಾಚಾರ, ಜಾತಿವಾದ ಮತ್ತು ಕುಟುಂಬ ರಾಜಕಾರಣದ ವಿರುದ್ಧವೂ ಮುಗಿಬಿದ್ದರು. ದ್ವೇಷವನ್ನೇ ಮೈಗೂಡಿಸಿಕೊಂಡಿರುವ ವಿಪಕ್ಷಗಳ ನಾಯಕರು, ಒಂದಾದ ಮೇಲೆ ಒಂದರಂತೆ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದರು.

ಏಕ್‌ ಬಾರ್‌ ಫಿರ್‌ ಸೆ ಭಾಜಪಾ ಸರ್ಕಾರ್‌
ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಏಕ್‌ ಬಾರ್‌ ಫಿರ್‌ ಸೆ ಭಾಜಪಾ ಸರ್ಕಾರ್‌’ (ಮತ್ತೂಂದು ಬಾರಿ ಬಿಜೆಪಿ ಸರಕಾರ) ಎಂಬ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದರು.

ವಿಪಕ್ಷಗಳ ವಿರುದ್ಧ ವಾಗ್ಧಾಳಿ
ತಮ್ಮ ಭಾಷಣದಲ್ಲಿ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದ ಮೋದಿ, ಇತ್ತೀಚೆಗೆ ನಡೆದ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮೋದಿ ನಿಮ್ಮ ಸಮಾಧಿ ತೋಡುತ್ತೇವೆ ಎಂಬ ಘೋಷಣೆಗಳು ಕೇಳಿಬಂದವು. ಇದು ವಿಪಕ್ಷಗಳು ತೀರಾ ಹತಾಶರಾಗಿರುವುದಕ್ಕೆ ಸಾಕ್ಷಿ. ಬಾದಶಾಹಿಗಳ ಮನಃಸ್ಥಿತಿ ಹೊಂದಿರುವ ಇವರು ಇತರರನ್ನು ವಿಶೇಷವಾಗಿ ಬಡವರು ಮತ್ತು ತುಳಿತಕ್ಕೊಳಗಾದವರನ್ನು ಗುಲಾಮರಂತೆ ನಡೆಸಿಕೊಂಡು ಬಂದಿದ್ದಾರೆ. ವಿಪಕ್ಷಗಳು ಕೇವಲ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತವೆ. ಆದರೆ, ಬಿಜೆಪಿ ಪ್ರತಿಯೊಬ್ಬ ಭಾರತೀಯನಿಗೂ ನೆರವಾಗಲು ಶ್ರಮಿಸುತ್ತದೆ ಎಂದರು.

10 ಲಕ್ಷ ಪ್ರದೇಶಗಳಲ್ಲಿ ಪ್ರಸಾರ
ಪ್ರಧಾನಿ ಮೋದಿ ಅವರು ಸುಮಾರು 50 ನಿಮಿಷಗಳ ಕಾಲ ಮಾತನಾಡಿದ್ದು, ದೇಶಾದ್ಯಂತ 10 ಲಕ್ಷ ಸ್ಥಳಗಳಲ್ಲಿ ಅಳವಡಿಸಲಾದ ಪರದೆಗಳಲ್ಲಿ ಈ ಭಾಷಣದ ನೇರಪ್ರಸಾರ ನಡೆಯಿತು. ಬಿಜೆಪಿ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಷಣವನ್ನು ಆಲಿಸಿದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.