ಭಾರತದ ಸೇನಾಪಡೆ ಸಾಹಸಕ್ಕೆ ಏಕೆ ಸಾಕ್ಷ್ಯ ಬೇಕು?ಮೋದಿ


Team Udayavani, Mar 4, 2019, 12:30 AM IST

pti332019000051b.jpg

ಪಾಟ್ನಾ/ಅಮೇಠಿ: ಭಾರತದ ಸೇನಾಪಡೆಯು ನಡೆಸಿದ ಪ್ರತಿಯೊಂದು ದಾಳಿಗೂ ಸಾಕ್ಷ್ಯ ಕೇಳುತ್ತಿರುವ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. 

ಪಾಕಿಸ್ತಾನಕ್ಕೆ ಹೊಂದುವಂಥ ಭಾಷೆಯಲ್ಲಿ ನಮ್ಮ ದೇಶದ ಪ್ರತಿಪಕ್ಷಗಳು ಮಾತನಾಡುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. 

ಬಿಹಾರದ ಪಾಟ್ನಾದಲ್ಲಿ ಭಾನುವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ನಾಯಕರಿಗೆ ನಮ್ಮ ಸೇನಾಪಡೆಯ ಸಾಮರ್ಥ್ಯದ ಬಗ್ಗೆ ನಂಬಿಕೆಯಿಲ್ಲ. ಅವರ ಮಾತುಗಳು ಪಾಕಿಸ್ತಾನಕ್ಕೆ ವರದಾನವಾಗುತ್ತಿವೆ. ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವು ತನ್ನನ್ನು ತಾನು ರಕ್ಷಿಸಿಕೊಳ್ಳಲು ನಮ್ಮ ದೇಶದ ಪ್ರತಿಪಕ್ಷಗಳ ಮಾತುಗಳನ್ನೇ ರಕ್ಷಾಕವಚವಾಗಿ ಬಳಸುತ್ತಿವೆ. ಇಡೀ ದೇಶವೇ ಒಂದು ಧ್ವನಿಯಲ್ಲಿ ಮಾತನಾಡಬೇಕಾದ ಅಗತ್ಯವಿದ್ದಾಗ, 21 ಪ್ರತಿಪಕ್ಷಗಳು ನವದೆಹಲಿಯಲ್ಲಿ ಸಭೆ ಸೇರಿ ನಮ್ಮನ್ನು ಖಂಡಿಸುವ ನಿರ್ಣಯ ಕೈಗೊಳ್ಳುತ್ತವೆ. ಸಶಸ್ತ್ರ ಪಡೆಗಳ ಸಾಹಸಕ್ಕೂ ಸಾಕ್ಷ್ಯ ಕೊಡಿ ಎಂದು ಕೇಳುತ್ತವೆ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. 

“ನಾನು ಭಯೋತ್ಪಾದನೆ, ಬಡತನ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಹೊರಟಿದ್ದರೆ, ಪ್ರತಿಪಕ್ಷಗಳು ನನ್ನನ್ನೇ ನಿರ್ಮೂಲನೆ ಮಾಡಲು ಮುಂದಾಗಿವೆ’ ಎಂದೂ ಅವರು ಆರೋಪಿಸಿದ್ದಾರೆ. 2009ರ ಬಳಿಕ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಜತೆಗಿನ ಮೊದಲ ರಾಜಕೀಯ ರ್ಯಾಲಿ ಇದಾಗಿದೆ.

ಸಾಕ್ಷ್ಯ ಬೇಕಂತೆ: ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ಬಾಲಕೋಟ್‌ನಲ್ಲಿ ನಡೆದ ವೈಮಾನಿಕ ದಾಳಿಗೆ ಕೇಂದ್ರ ಸರ್ಕಾರ ಸಾಕ್ಷ್ಯವಿದ್ದರೆ ಕೊಡಲಿ ಎಂದು ಹೇಳಿದ್ದಾರೆ. ಅಲ್ಲದೆ, ಐಎಎಫ್ ವಿಂಗ್‌ ಕಮಾಂಡರ್‌ ಅಭಿನಂದನ್‌ರನ್ನು ಬಿಡುಗಡೆ ಮಾಡಿದ್ದಕ್ಕೆ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ಗೆ ಧನ್ಯವಾದವನ್ನೂ ಸಲ್ಲಿಸಿದ್ದಾರೆ. ಇತ್ತೀಚೆಗೆ ಮಾತನಾಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಯೋಧರ ಜೀವವು ರಾಜಕೀಯಕ್ಕಿಂತಲೂ ಹೆಚ್ಚು ಮೌಲ್ಯಯುತವಾದದ್ದು. ಆದರೆ, ಬಾಲಾಕೋಟ್‌ನಲ್ಲಿ ನಿಜವಾಗಿ ನಡೆದಿದ್ದೇನು ಎಂದು ತಿಳಿದುಕೊಳ್ಳುವ ಅಧಿಕಾರ ದೇಶಕ್ಕಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ರಸಗೊಬ್ಬರ ಖಾಲಿ; ರಾಜ್ಯದಲ್ಲಿ ಹಿಂಗಾರು, ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜ್ಯದಲ್ಲಿ ಹಿಂಗಾರು,ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ದೇಗುಲಗಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ ಸ್ವಾಗತಾರ್ಹ

ದೇಗುಲಗಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ ಸ್ವಾಗತಾರ್ಹ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.