ಶ್ರೀರಾಮನಂತೆ ಮೋದಿ : ಚೌಹಾಣ್ ಬಹುಪರಾಕ್
Team Udayavani, Jan 29, 2020, 11:44 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹನುಮಂತನಿದ್ದಂತೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹನುಮಂತನಿದ್ದಂತೆ ಎಂದು ಬಣ್ಣಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿಶ್ವದ ಯಾವುದೇ ಶಕ್ತಿಗಳು ಕೂಡ ತಡೆಯಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಸಿಂಹವಿದ್ದಂತೆ, ಅವರು ಯಾವುದಕ್ಕೂ, ಯಾರಿಗೂ ಹೆದರುವುದಿಲ್ಲ ಎಂದಿದ್ದಾರೆ.