ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ
Team Udayavani, Jan 24, 2022, 10:45 PM IST
ನವದೆಹಲಿ: ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆಯಾದ ಸೋಮವಾರ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ತಮ್ಮ ಸರ್ಕಾರಕ್ಕೆ ಹೆಣ್ಣು ಮಕ್ಕಳಿಗೆ ಹೆಚ್ಚಿನ ಅವಕಾಶಗಳು ದೊರೆಯುವಂತೆ ಮಾಡುವುದು, ಅವರ ಗೌರವವನ್ನು ಹೆಚ್ಚಿಸುವ ಗುರಿಯಿದೆ.
ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಇದನ್ನು ಸಾಧಿಸಲು, ನೆನಪಿಸಿಕೊಳ್ಳಲು ಒಂದು ಒಳ್ಳೆಯ ಅವಕಾಶ ಎಂದು ಮೋದಿ ಹೇಳಿದ್ದಾರೆ.
ಪ್ರತೀವರ್ಷ ಜ.24ರಂದು ಭಾರತದಲ್ಲಿ ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಮಾಡಲಾಗುತ್ತದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದಡಿ ಈ ಕಾರ್ಯಕ್ರಮ ನಡೆಯುತ್ತದೆ.
ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್ ನೇರ ಪ್ರಸಾರಕ್ಕೆ ದೂರದರ್ಶನ ಸಿದ್ಧತೆ : 59 ಕ್ಯಾಮೆರಾ, 160 ಸಿಬ್ಬಂದಿ