Mann ki Baat ; ದೊಡ್ಡ ಕುಟುಂಬಗಳು ವಿದೇಶದಲ್ಲಿ ಮದುವೆ ಆಯೋಜಿಸದಂತೆ ಪ್ರಧಾನಿ ಮನವಿ
ರಾಷ್ಟ್ರ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು
Team Udayavani, Nov 26, 2023, 5:42 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 107ನೇ ಆವೃತ್ತಿಯ ‘ಮನ್ ಕಿ ಬಾತ್’ ನಲ್ಲಿ ಮಾತನಾಡುವ ವೇಳೆ ಸಾಗರೋತ್ತರ ವಿವಾಹಗಳ ಪ್ರವೃತ್ತಿಯ ಕುರಿತು ಪ್ರಸ್ತಾವಿಸಿ, ಭಾರತದ ಹಣ ದೇಶದಿಂದ ಹೊರ ಹೋಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅಂತಹ ಆಚರಣೆಗಳನ್ನು ದೇಶದೊಳಗೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಕೆಲವು ದೊಡ್ಡ ಕುಟುಂಬಗಳು ವಿದೇಶದಲ್ಲಿ ಮದುವೆಗಳನ್ನು ಆಯೋಜಿಸುವ ಪ್ರವೃತ್ತಿ ಹೊಂದಿವೆ. ಈ ಮದುವೆಯ ಋತುವಿನಲ್ಲಿ, ಕೆಲವು ವ್ಯಾಪಾರ ಸಂಸ್ಥೆಗಳು ಈ ವರ್ಷ ಸುಮಾರು 5 ಲಕ್ಷ ಕೋಟಿ ವ್ಯಾಪಾರ ಆಗಬಹುದೆಂದು ಅಂದಾಜಿಸಿದ್ದಾರೆ. ಮದುವೆಗಳಿಗೆ ಶಾಪಿಂಗ್ ಮಾಡುವಾಗ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುವಂತೆ ಅವರು ಜನರನ್ನು ಒತ್ತಾಯಿಸಿದರು.
ವಿದೇಶದಲ್ಲಿ ಮದುವೆಗಳ ಟ್ರೆಂಡ್ ನಿಂತರೆ, ಭಾರತದ ಜನರು ಅಂತಹ ಕಾರ್ಯಕ್ರಮಗಳಲ್ಲಿ ಸೇವೆಗಳನ್ನು ನೀಡಲು ಅವಕಾಶವನ್ನು ಪಡೆಯುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.
”ವೋಕಲ್ ಫಾರ್ ಲೋಕಲ್ ನ ಈ ಮಿಷನ್ ಅನ್ನು ನೀವು ವಿಸ್ತರಿಸಬೇಕು. ಸಾಗರೋತ್ತರ ಮದುವೆಗಳನ್ನು ಇಷ್ಟಪಡುವ ದೊಡ್ಡ ಕುಟುಂಬಗಳಿಗೆ ಸಂಬಂಧಿಸಿದ ವಿಷಯವಾಗಿದ್ದು,ನನ್ನ ಈ ನೋವು ಖಂಡಿತವಾಗಿಯೂ ಆ ಕುಟುಂಬಗಳನ್ನು ತಲುಪುತ್ತದೆ ಎಂದು ನಾನು ಭಾವಿಸುತ್ತೇನೆ. ಜನರು ದೊಡ್ಡ ಪ್ರಮಾಣದಲ್ಲಿ ಭಾಗವಹಿಸಿ ರಾಷ್ಟ್ರ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡರೆ, ವಿಶ್ವದ ಯಾವುದೇ ಶಕ್ತಿಯು ದೇಶದ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ