23-27ರ ವರೆಗೆ ಪಿಎಂ ವಿದೇಶ ಪ್ರವಾಸ
Team Udayavani, Jul 21, 2018, 6:00 AM IST
ನವದೆಹಲಿ/ಬೀಜಿಂಗ್: ಪ್ರಸಕ್ತ ಸಾಲಿನ ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲೋಸುಗ ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ. ಜು.23-27ರ ವರೆಗೆ ಅವರು ವಿದೇಶ ಪ್ರವಾಸದಲ್ಲಿ ಇರಲಿದ್ದಾರೆ. ವಿದೇಶ ಪ್ರವಾಸದ ಮೊದಲ ಹಂತವಾಗಿ ಪ್ರಧಾನಿ ಮೋದಿ ರವಾಂಡಾಕ್ಕೆ ಭೇಟಿ ನೀಡಲಿದ್ದಾರೆ. ಅವರು ರವಾಂಡಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಅಲ್ಲಿ 2 ದಿನಗಳ ಕಾಲ ಇರಲಿದ್ದಾರೆ.
ನಂತರ ಜು.24ಕ್ಕೆ ಉಗಾಂಡಾಕ್ಕೆ ತೆರಳಲಿದ್ದಾರೆ. ಬಳಿಕ ದಕ್ಷಿಣ ಆಫ್ರಿಕದ ಜೊಹಾನ್ಸ್ಬರ್ಗ್ನಲ್ಲಿ ನಡೆಯಲಿರುವ ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ಬಗ್ಗೆ ಸದ್ಯ ಏನನ್ನೂ ತೀರ್ಮಾನಿಸಲಾಗಿಲ್ಲ ಎಂದು ವಿದೇಶಾಂಗ ಇಲಾಖೆ ನವದೆಹಲಿಯಲ್ಲಿ ತಿಳಿಸಿದೆ. ಆದರೆ ಬೀಜಿಂಗ್ನಲ್ಲಿ ಪ್ರತಿಕ್ರಿಯೆ ನೀಡಿದ ಚೀನಾ ವಿದೇಶಾಂಗ ಇಲಾಖೆ ವಕ್ತಾರ, “ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನದ ವೇಳೆ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲಿದ್ದಾರೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ