ಮೈತ್ರಿಗೆ ಮುನ್ನವೇ ಪೋಸ್ಟರ್ಗಳಲ್ಲಿ ಪ್ರಿಯಾಂಕಾ, ಡಿಂಪಲ್ ಚಿತ್ರ !
Team Udayavani, Jan 14, 2017, 4:31 PM IST
ಲಕ್ನೋ : ಉತ್ತರ ಪ್ರದೇಶ ವಿದಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಆಳುವ ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಯನ್ನು ಖಚಿತ ಪಡಿಸುವ ರೀತಿಯಲ್ಲಿ ಅಲಹಾಬಾದ್ನಲ್ಲಿ ಕಂಡು ಬಂದಿರುವ ಭಾರೀ ಗಾತ್ರದ ಪೋಸ್ಟರ್ಗಳಲ್ಲಿ ಪ್ರಿಯಾಂಕಾ ಗಾಂಧಿ ಮತ್ತು ರಾಜ್ಯದ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಅವರ ಪತ್ನಿ ಹಾಗೂ ಸಂಸದೆಯಾಗಿರುವ ಡಿಂಪಲ್ ಯಾದವ್ ಅವರ ಪೋಟೋಗಳು ರಾರಾಜಿಸ ತೊಡಗಿವೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ, ಮುಖ್ಯಮಂತ್ರಿ ಅಖೀಲೇಶ್ ಯಾದವ್ ನಡುವೆ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ಗಾಗಿ ಜಟಾಪಟಿ ಮುಂದುವರಿದಿರುವಂತೆಯೇ ಸೈಕಲ್ ವಾರೀಸುದಾರ ಯಾರೆಂಬುದನ್ನು ಚುನಾವಣಾ ಆಯೋಗ ತೀರ್ಮಾನಿಸಲಿದೆ.
ಈ ತೀರ್ಮಾನದ ಬಳಿಕವೇ ಸಮಾಜವಾದಿ ಮತ್ತು ಕಾಂಗ್ರೆಸ್ ನಡುವಿನ ಚುನಾವಣಾಪೂರ್ವ ಮೈತ್ರಿಯ ನಿರ್ಧಾರವಾಗಲಿದೆ. ನಿನ್ನೆ ಶುಕ್ರವಾರ ಚುನಾವಣಾ ಆಯೋಗ ಸೈಕಲ್ ಕುರಿತ ತನ್ನ ತೀರ್ಪನ್ನು ಕಾದಿರಿಸಿದೆ.
ಉತ್ತರ ಪ್ರದೇಶದ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಜನವರಿ 17ರಿಂದ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು