ಪ್ರಿಯಾಂಕ ಗಾಂಧಿ ವಾದ್ರಾ ಇಂದು ಪ್ರಯಾಗ್ ರಾಜ್ ಗೆ ಭೇಟಿ..!

ದೋಣಿ ನಡೆಸುವ ನಿಷಾದ್ ಸಮುದಾಯದ ಬೆಂಬಲಕ್ಕೆ ಪ್ರಯಾಗ್ ರಾಜ್ ಗೆ ತೆರಳಲಿರುವ ಪ್ರಿಯಾಂಕ

Team Udayavani, Feb 21, 2021, 10:29 AM IST

Priyanka Gandhi to visit Prayagraj to support boatman who accompanied her at Sangam

ನವ ದೆಹಲಿ : ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ (ಫೆ.  21) ದಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದಾರೆ.

ಸ್ಥಳೀಯ ಪೊಲೀಸರಿಂದ ಕಿರುಕುಳಕ್ಕೊಳಗಾದ ಬೋಟ್ ಮೆನ್ (ದೋಣಿ ನಡೆಸುವವರು) ಅವರಿಗೆ ಬೆಂಬಲಿಸಲು ಪ್ರಿಯಾಂಕ ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಓದಿ : ಬಹು ಭಾಷಾ ನಟಿ ಪೊನಾಂ ಬಾಜ್ವಾ ಹಾಟ್ ಫೋಟೋಸ್

ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರು ಇತ್ತೀಚೆಗೆ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಯ ಸಂಗಮವಾದ ಮೌನಿ ಅಮಾವಾಸ್ಯೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಅಲ್ಲಿ ಪೂಜೆಯನ್ನು ಸಲ್ಲಿಸಿದ ನಂತರ ಮತ್ತು ನಂತರ ಅವರು ಸುಜಿತ್ ನಿಷಾದ್ ದೋಣಿಯಲ್ಲಿ ಪ್ರಯಾಣಿಸಿದರು.

ಆ ವೀಡಿಯೋವನ್ನು ಪ್ರಿಯಾಂಕ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ನಿಶಾದ್ ಸಮುದಾಯಕ್ಕೆ ಸೇರಿದ ದೋಣಿ ವಿಹಾರಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುಜಿತ್ ಆ ಸಂದರ್ಭದಲ್ಲಿ ಪ್ರಿಯಾಂಕ ಅವರಿಗೆ ತಿಳಿಸಿದ್ದರು.ನಮ್ಮ ಸಮುದಾಯದವರ ಮೇಲೆ ಲೋಕಲ್ ಪೊಲೀಸರಿಂದ ನಮಗೆ ಸಮಸ್ಯೆಯಾಗುತ್ತಿದೆ. ನಾವು ನಿಮ್ಮ ಸಹಾಯವನ್ನು ಬಯಸುತ್ತೇವೆ ಎಂದು ಪ್ರಿಯಾಂಕ ಅವರನ್ನು ಸುಜೀತ್ ಕೇಳಿಕೊಂಡಿದ್ದರು. ಹಾಗಾಗಿ ಇಂದು ಪ್ರಿಯಾಂಕ ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ.

ಪಕ್ಷ ಬಿಡುಗಡೆ ಮಾಡಿದ ಕಾರ್ಯಕ್ರಮಗಳ ಪಟ್ಟಿಯ ಪ್ರಕಾರ, ಪ್ರಿಯಾಂಕಾ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪ್ರಯಾಗ್ ರಾಜ್ ತಲುಪಲಿದ್ದು, ಮೀನುಗಾರ ಸಮುದಾಯದ ಸದಸ್ಯರನ್ನು ಭೇಟಿ ಮಾಡಲು ಜಿಲ್ಲೆಯ ಟ್ರಾನ್ಸ್-ಯಮುನಾ ಪ್ರದೇಶದ ಬನ್ಸ್ವಾರ್ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ಹಿಂದುಳಿದ ನಿಷಾದ್ ಸಮುದಾಯಕ್ಕೆ ಸೇರಿದ ಕೆಲವು ದೋಣಿಗಳು ಪೊಲೀಸರಿಂದ ಹಾಗೂ ಆಡಳಿತದ ಅಧಿಕಾರಿಗಳಿಂದ ಹಾನಿಗೊಳಗಾಗಿವೆ ಎಂದು ಸುಜಿತ್ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ ಸರ್ಕಾರವು 24 ಜೂನ್ 2019 ರಂದು ರಾಜ್ಯಾದ್ಯಂತ ಮರಳು ಗಣಿಗಾರಿಕೆಯಲ್ಲಿ ದೋಣಿಗಳ ಬಳಕೆಯನ್ನು ನಿಷೇಧಿಸಿತ್ತು. ಈ ಕಾರಣದಿಂದಾಗಿ ಇದ್ದಕ್ಕಿದ್ದಂತೆ ನಿಷಾದ್ ಸಮುದಾಯದ ಲಕ್ಷಾಂತರ ಜನರು ನಿರುದ್ಯೋಗಿಗಳಾದರು. ಅವರಲ್ಲಿ ಹಲವರು ಉತ್ತರಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಈ ಉದ್ಯೋಗವನ್ನೇ ಅವಲಂಬಿಸಿದ್ದಾರೆ. 2013 ರಲ್ಲಿ, ಎನ್‌ ಜಿ ಟಿ ಯಂತ್ರಗಳನ್ನು ಬಳಸಿ ನದಿಗಳಿಂದ ಮರಳು ಹೊರತೆಗೆಯುವುದನ್ನು ನಿಷೇಧಿಸಿತ್ತು, ಆದರೆ ಗಣಿಗಾರಿಕೆ ಕಂಪನಿಗಳು ಅದನ್ನು ಪೋಕ್‌ ಲ್ಯಾಂಡ್ ಯಂತ್ರಗಳೊಂದಿಗೆ ಹೊರತೆಗೆಯುವುದನ್ನು ಮುಂದುವರೆಸಿದವು ಎಂದು ಎ ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಓದಿ : ಹಾಸನ: ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ; ಸ್ಥಳದಲ್ಲೇ ನಾಲ್ವರು ಸಾವು, 13 ಮಂದಿಗೆ ಗಂಭೀರ ಗಾಯ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.