ಮನಃಶಾಸ್ತ್ರ, ಎಐ, ಸಂವಿಧಾನ, ದತ್ತಾಂಶ: ಇದು ಭವಿಷ್ಯದ ಸಿಎಗಳ ಪಠ್ಯಕ್ರಮ

ಹೊಸ ಪಠ್ಯಕ್ರಮಕ್ಕೆ ಸರಕಾರದ ಒಪ್ಪಿಗೆಯೊಂದೇ ಬಾಕಿ; ಕಂಪ್ಯೂಟರ್‌ ಆಧಾರಿತ ವ್ಯವಸ್ಥೆಯಲ್ಲಿ ಭಾಷಾ ಪರೀಕ್ಷೆ

Team Udayavani, Jan 9, 2023, 7:43 AM IST

ಮನಃಶಾಸ್ತ್ರ, ಎಐ, ಸಂವಿಧಾನ, ದತ್ತಾಂಶ: ಇದು ಭವಿಷ್ಯದ ಸಿಎಗಳ ಪಠ್ಯಕ್ರಮ

ಹೊಸದಿಲ್ಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಅನುಗುಣವಾಗಿ ಸಿಎ (ಚಾರ್ಟರ್ಡ್‌ ಅಕೌಂಟೆಂಟ್‌) ಕೋರ್ಸ್‌ಗೆ ಈಗ ಹೊಸ ಲುಕ್‌ ಸಿಕ್ಕಿದೆ. ಈ ಕೋರ್ಸ್‌ನ ಪಠ್ಯಕ್ರಮಕ್ಕೆ ಬಹುಶಿಸ್ತೀಯ ಆಯಾಮವನ್ನು ನೀಡಲಾಗಿದ್ದು, ಇನ್ನು ಮುಂದೆ ಚಾರ್ಟರ್ಡ್‌ ಅಕೌಂಟೆಂಟ್‌ ಕೋರ್ಸ್‌ ಮಾಡುವವರು ಮನಃಶಾಸ್ತ್ರದಿಂದ ಕೃತಕ ಬುದ್ಧಿಮತ್ತೆವರೆಗೆ, ಬ್ಲಾಕ್‌ಚೈನ್‌ ತಂತ್ರಜ್ಞಾನದಿಂದ ದತ್ತಾಂಶ ವಿಜ್ಞಾನದವರೆಗೆ, ಭಾರತೀಯ ಸಂವಿಧಾನದಿಂದ ಸಾಂಪ್ರದಾಯಿಕ ಜ್ಞಾನದವರೆಗೆ ವೈವಿಧ್ಯಮಯ ವಿಷಯಗಳನ್ನು ಕಲಿಯಲಿದ್ದಾರೆ.

ವಾಣಿಜ್ಯಕ್ಕೆ ಸಂಬಂಧಿಸಿದ 2 ದಿನಗಳ ರಾಷ್ಟ್ರೀಯ ಶಿಕ್ಷಣ ಶೃಂಗದಲ್ಲಿ ಭಾರತೀಯ ಚಾರ್ಟರ್ಡ್‌ ಅಕೌಂಟೆಂಟ್‌ಗಳ ಸಂಸ್ಥೆ (ಐಸಿಎಐ) ಈ ಹೊಸ ಪಠ್ಯಕ್ರಮವನ್ನು ಘೋಷಣೆ ಮಾಡಿದೆ. ಇದಕ್ಕೆ ಕೇಂದ್ರ ಸರಕಾರದ ಒಪ್ಪಿಗೆ ಸಿಗಲು ಬಾಕಿಯಿದೆ.

ಇದೇ ವೇಳೆ ಕಂಪ್ಯೂಟರ್‌ ಆಧರಿತ ವ್ಯವಸ್ಥೆಯಲ್ಲಿ ಮತ್ತು ಭಾರತೀಯ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸುವ ಕುರಿತೂ ಚಿಂತನೆ ನಡೆಸಲಾಗಿದೆ ಎಂದು ಐಸಿಎಐ ಹೇಳಿದೆ. ಪ್ರಸ್ತುತ ದೇಶದಲ್ಲಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಸಿಎ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಒಂದು ಶೈಕ್ಷಣಿಕ ಸಂಸ್ಥೆಯಾಗಿ ಜಾಗತಿಕ ವೃತ್ತಿಪರರನ್ನು ರೂಪಿಸುವುದು ನಮ್ಮ ಕರ್ತವ್ಯವಾಗಿರುತ್ತದೆ. ಇದೇ ಕಾರಣಕ್ಕಾಗಿ ನಾವು ಆಳವಾಗಿ ಚಿಂತನೆ ನಡೆಸಿ, ತಂತ್ರಜ್ಞಾನ, ನೈತಿಕತೆ, ಹೊಸ ಎನ್‌ಇಪಿಗಳ ಆಧಾರದಲ್ಲಿ ಹೊಸ ಪಠ್ಯಕ್ರಮವನ್ನು ರೂಪಿಸಿದ್ದೇವೆ.

ತಂತ್ರಜ್ಞಾನವನ್ನು ನೀವು ಕಲಿಯದೇ ಇದ್ದರೆ ಯಾವುದೇ ಕ್ಷೇತ್ರದಲ್ಲಿ ನೀವು ದೂರ ಸಾಗಲು ಸಾಧ್ಯವಿಲ್ಲ. ಅಕೌಂಟಿಂಗ್‌ ಕೂಡ ಹಾಗೆಯೇ. ನಾವು ಅದನ್ನು ಐಸಿಎಐ ಪರಿಧಿಯೊಳಗೇ ಇಟ್ಟರೆ ಈ ಕ್ಷೇತ್ರಕ್ಕೆ ನ್ಯಾಯ ಕೊಟ್ಟಂತಾಗುವುದಿಲ್ಲ. ಅದು ಕೇವಲ ಭಾರತ ಮಾತ್ರವಲ್ಲ, ಜಗತ್ತಿಗೇ ತೆರೆದುಕೊಳ್ಳಬೇಕು ಎಂದು ಐಸಿಎಐ ಅಧ್ಯಕ್ಷ ದೇಬಶಿಶ್‌ ಮಿತ್ರಾ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.