ಪುಲ್ವಾಮಾ: ಪಾಕ್ ಪ್ರಧಾನಿ ಇಮ್ರಾನ್ ಮೌನಕ್ಕೆ ಅಮಿತ್ ಶಾ ಖಂಡನೆ
Team Udayavani, Mar 1, 2019, 6:26 AM IST
ಹೊಸದಿಲ್ಲಿ : ಕನಿಷ್ಠ 40 ಸಿಆರ್‌ಪಿಎಫ್ ಯೋಧರನ್ನು ಬಲಿಪಡೆದ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಪುಲ್ವಾಮಾ ದಾಳಿಯ ಬಗ್ಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಹಿಸಿರುವ ಜಾಣ ಮೌನವನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಖಂಡಿಸಿದ್ದಾರೆ.
‘ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಈ ವರೆಗೂ ಜೈಶ್ ಉಗ್ರ ಸಂಘಟನೆಯ ಪುಲ್ವಾಮಾ ದಾಳಿಯನ್ನು ಖಂಡಿಸಿಯೂ ಇಲ್ಲ, 40 ಯೋಧರು ಆ ದಾಳಿಗೆ ಬಲಿಯಾಗಿರುವುದಕ್ಕೆ ಶೋಕ, ಆಘಾತ, ದುಃಖ ಮುಂತಾಗಿ ಏನನ್ನೂ ವ್ಯಕ್ತಪಡಿಸಿಲ್ಲ; ಅವರ ಈ ನಿಲುವು ಭೀತಿವಾದವನ್ನು ಬೆಂಬಲಿಸುವ ಅವರ ನೀತಿಯನ್ನು ಪ್ರಕಟಿಸುವಂತಿದೆ’ ಎಂದು ಅಮಿತ್ ಶಾ ಟೀಕಿಸಿದ್ದಾರೆ.
ಇಂಡಿಯಾ ಟುಡೇ ಕಾನ್‌ಕ್ಲೇವ್ ನಲ್ಲಿ ಮಾತನಾಡಿದ ಅಮಿತ್ ಶಾ, ಪಾಕಿಸ್ಥಾನದಲ್ಲಿನ ಉಗ್ರರನ್ನು ಸದೆ ಬಡಿಯುವ ಮೂಲಕ ಪ್ರಧಾನಿ ಮೋದಿ ಸರಕಾರ ಭಯೋತ್ಪಾದನೆಯ ಹಿಂದಿರುವ ಮನಸ್ಸುಗಳಲ್ಲಿ ಭಯವನ್ನು ಸೃಷ್ಟಿಸಿದೆ ಎಂದು ಹೇಳಿದರು.
ಪಾಕಿಸ್ಥಾನದ ಫಖ್‌ತೂನ್‌ಖ್ವಾ ಪ್ರಾಂತ್ಯದಲ್ಲಿನ ಬಾಲಾಕೋಟ್ ನ ಜೈಶ್ ಉಗ್ರರ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ವೈಮಾನಿಕ ದಾಳಿ ನಡೆಸಿ 350 ಉಗ್ರರನ್ನು ಬಲಿಪಡೆದಿರುವುದನ್ನು ಅಮಿತ್ ಶಾ ಸಮರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ