ಪ್ರೇಮ ವಿವಾಹ ತಿರಸ್ಕರಿಸಿದ್ದಕ್ಕೆ ಕಿರುಕುಳ ನೀಡಿದರೆ ಕಠಿಣ ಕ್ರಮ: ಸಿಎಂ ಪಿಣರಾಯಿ ವಿಜಯನ್
Team Udayavani, Aug 11, 2021, 9:30 PM IST
ತಿರುವನಂತಪುರ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ ಕಾರಣ ಮುಂದಿಟ್ಟುಕೊಂಡು ಮಹಿಳೆಯರಿಗೆ ಕಿರುಕುಳ ಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರು ಪ್ರೀತಿ-ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಾರೆ ಎಂದು ನೆಪವೊಡ್ಡಿ ಕಿರುಕುಳ ನೀಡುವವರ ಮೇಲೆ ಪೊಲೀಸರು ನಿಗಾ ಇರಿಸಲಿದ್ದಾರೆ. ತೊಂದರೆ ಕೊಡುವವರು ಮಹಿಳೆಯರನ್ನು ಕೊಲ್ಲುವ ಹಂತದ ವರೆಗೆ ಹೋಗದೆ ಇರುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.
ಎರ್ನಾಕುಳಂನ ಕೋತಮಂಗಲಂನಲ್ಲಿ 24 ವರ್ಷದ ದಂತ ವೈದ್ಯ ವಿದ್ಯಾರ್ಥಿನಿಯನ್ನು ಆಕೆ ಪ್ರೇಮಿ ಗುಂಡು ಹಾರಿಸಿ ಹತ್ಯೆ ಮಾಡಿದ್ದು ಸೇರಿದಂತೆ ದೇವರೊಲಿದ ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳ, ಅತ್ಯಾಚಾರ ನಡೆಸಿ ಕೊಲೆ ಸೇರಿದಂತೆ ಹಲವಾರು ಮಹಿಳೆಯರ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಸಿಎಂ ಎಚ್ಚರಿಕೆ ಮಹತ್ವಪಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಆಮಿಷಕ್ಕೆ ಒಳಪಡಿಸಿ ಸಿಲುಕಿಸಿ ಹಾಕುವ ಜಾಲದಿಂದ ನೊಂದಿದ್ದರೆ, ಅಂಥ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಬೇಕು. ಇದರಿಂದಾಗಿ ನೊಂದಿರುವವರಿಗೆ ಧೈರ್ಯ ತುಂಬುವ ಕೆಲಸನ್ನೂ ಪೊಲೀಸರು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಪಲ್ಸರ್ ಆಲ್ ಬ್ಲ್ಯಾಕ್ ಬಿಡುಗಡೆ: ಗ್ಲಾಸಿ ಬ್ರೂಕ್ಲಿನ್ ಬ್ಲ್ಯಾಕ್ ಶೇಡ್ ಬೈಕ್
ಇಂದು ಶ್ರೀಲಂಕಾ- ಭಾರತ ದ್ವಿತೀಯ ಟಿ20: ಅಗ್ರ ಕ್ರಮಾಂಕದತ್ತ ಗಮನ
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ಕಪಿಲ್ದೇವ್ ಸಾರಥ್ಯದ ವಿಶ್ವಕಪ್ ಗೆಲುವಿಗೆ 39ರ ಸಂಭ್ರಮ
ಮುಳುಗಿದ ಪ್ರಿನ್ಸೆಸ್ ಮಿರಾಲ್ ಹಡಗು: ಇನ್ನು ತೈಲ ಸೋರಿಕೆ ತಡೆಯುವ ಸವಾಲು