ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲು
Team Udayavani, Oct 3, 2022, 10:10 AM IST
ಮೊಹಾಲಿ: ಪಂಜಾಬಿ ಗಾಯಕ ಅಲ್ಫಾಜ್ ಯಾನೆ ಅಮಾನ್ಜೋತ್ ಸಿಂಗ್ ಪನ್ವಾರ್ ಅವರನ್ನು ಶನಿವಾರ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಧಾಬಾ ಒಂದರಲ್ಲಿ ವಾಹನಕ್ಕೆ ಢಿಕ್ಕಿ ಹೊಡೆದು ಗಾಯವಾಗಿದೆ ಎನ್ನಲಾಗಿದೆ.
ಗಾಯಕ ಹನಿ ಸಿಂಗ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ‘ಅಲ್ಫಾಜ್ ಅಪಾಯದಿಂದ ಪಾರಾಗಿದ್ದಾರೆ’ ಎಂದಿದ್ದಾರೆ.
ವರದಿಗಳ ಪ್ರಕಾರ, ಗಾಯಕನು ತನ್ನ ಮೂವರು ಸ್ನೇಹಿತರ ಜೊತೆ ಡಾಬಾಗೆ ಬಂದಿದ್ದರು. ಅಲ್ಲಿಂದ ಹೊರಡುವ ಸಮಯದಲ್ಲಿ ಡಾಬಾದ ಮಾಜಿ ಉದ್ಯೋಗಿ ವಿಕ್ಕಿ ಅದರ ಮಾಲೀಕರೊಂದಿಗೆ ಜಗಳ ಮಾಡುತ್ತಿದ್ದ. ಅಲ್ಲದೆ ಅಲ್ಫಾಜ್ ನನ್ನು ಕಂಡ ವಿಕ್ಕಿ, ಕೂಡಲೇ ಮಧ್ಯಪ್ರವೇಶಿಸಿ ತನ್ನ ಸಮಸ್ಯೆ ಬಗೆಹರಿಸುವಂತೆ ಕೇಳಿಕೊಂಡಿದ್ದಾನೆ. ಗಾಯಕ ಮಧ್ಯಪ್ರವೇಶಿಸಲು ನಿರಾಕರಿಸಿದಾಗ ವಿಕ್ಕಿ ಮಾಲೀಕರ ಟೆಂಪೋದೊಂದಿಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ವಾಹನವನ್ನು ಹಿಂದೆ ತೆಗೆಯುವಾಗ ಅಲ್ಫಾಜ್ ಗೆ ಢಿಕ್ಕಿ ಹೊಡೆದಿದ್ದಾನೆ.
ಇದನ್ನೂ ಓದಿ:ಬಾಬರ್ ಅಜಂ- ರಿಜ್ವಾನ್ ದಾಖಲೆ ಮುರಿದ ಕೆಎಲ್ ರಾಹುಲ್- ರೋಹಿತ್ ಜೋಡಿ
ಅಲ್ಫಾಜ್ ತಲೆ, ಕೈ ಮತ್ತು ಕಾಲಿಗೆ ಗಾಯಗಳಾಗಿದೆ. ಸ್ನೇಹಿತರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿ ವಿಕ್ಕಿ ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ, ಆದರೆ ನಂತರ ಆತನನ್ನು ಮೊಹಾಲಿ ಪೊಲೀಸರು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?