Putin ರಷ್ಯಾ ಅಧ್ಯಕ್ಷ; ಪಿಎಂ ಮೋದಿ ಅಭಿನಂದನೆ: ಯುದ್ಧ ನಿಲ್ಲಿಸಲು ಕರೆ
Team Udayavani, Mar 21, 2024, 6:25 AM IST
ಹೊಸದಿಲ್ಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಬುಧ ವಾರ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮಾತುಕತೆ ಮತ್ತು ರಾಜ ತಾಂತ್ರಿಕ ಮಾರ್ಗದ ಮೂಲಕ ರಷ್ಯಾ- ಉಕ್ರೇನ್ ಯುದ್ಧ ಕೊನೆಗೊಳಿಸುವಂತೆ ಸಲಹೆ ನೀಡಿದರು.
ಇದೇ ವೇಳೆ ಲೋಕಸಭೆ ಚುನಾವಣೆ ಯಶಸ್ಸಿಗೆ ಶುಭ ಹಾರೈಸಿರುವ ಪುತಿನ್ ಮತ್ತು ಝೆಲೆನ್ಸ್ಕಿ, ಚುನಾವಣೆ ಮುಗಿದ ಅನಂತರ ತಮ್ಮ ದೇಶಕ್ಕೆ ಭೇಟಿ ನೀಡುವಂತೆ ಮೋದಿಗೆ ಉಭಯರು ಆಹ್ವಾನ ನೀಡಿದ್ದಾರೆ.
ಮೊದಲಿಗೆ ಪುತಿನ್ಗೆ ಕರೆ ಮಾಡಿದ ಪ್ರಧಾನಿ ಮೋದಿ , 5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಪುತಿನ್ ಅವರನ್ನು ಅಭಿನಂದಿಸಿದರು. ಈ ವೇಳೆ ಭಾರತ- ರಷ್ಯಾ ಸಂಬಂಧ ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದರು. ಅನಂತರ ಝೆಲೆನ್ಸ್ಕಿಗೆ ಕರೆ ಮಾಡಿದ ಮೋದಿ ಭಾರತ- ಉಕ್ರೇನ್ ದ್ವಿಪಕ್ಷೀಯ ಸಂಬಂಧ ಗಟ್ಟಿ ಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿ ದರು. ಅಲ್ಲದೇ ರಷ್ಯಾ- ಉಕ್ರೇನ್ ಯುದ್ಧ ಶೀಘ್ರ ಕೊನೆಗೊಳಿಸುವ ನಿಟ್ಟಿನಲ್ಲಿ ಶಾಂತಿಯುತ ಮಾತುಕತೆಗೆ ಭಾರತ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ