FTII ನೂತನ ಅಧ್ಯಕ್ಷರಾಗಿ ಖ್ಯಾತ ನಟ ಮಾಧವನ್ ನೇಮಕ
Team Udayavani, Sep 1, 2023, 10:04 PM IST
ನವದಹೆಲಿ: ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಮಂಡಳಿಯ (ಎಫ್ ಟಿಐಐ) ನೂತನ ಅಧ್ಯಕ್ಷರಾಗಿ ಖ್ಯಾತ ನಟ ಆರ್.ಮಾಧವನ್ ನೇಮಕಗೊಂಡಿದ್ದಾರೆ.
ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಎಫ್ ಟಿಐಐನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಚೇರ್ಮನ್ ಆಗಿರುವ ಮಾಧವನ್ ಅವರಿಗೆ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಹಾಗೂ ಬಲವಾದ ನೈತಿಕತೆ ಈ ಸಂಸ್ಥೆಯನ್ನು ಮುನ್ನಡೆಸುತ್ತದೆ ಎಂದು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಧವನ್, ಎಲ್ಲರ ಶುಭಹಾರೈಕೆಗಳಿಗೆ ಧನ್ಯವಾದಗಳು, ನಿಮ್ಮೆಲ್ಲರ ನಿರೀಕ್ಷೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಕಾರ್ಯನಿರ್ವಹಿಸುತ್ತೇನೆ ಎಂದಿದ್ದಾರೆ.