ರಫೇಲ್‌: ಖರ್ಗೆ ನಿರ್ಧಾರಕ್ಕೆ ಪಿಎಸಿ ವಿರೋಧ


Team Udayavani, Dec 17, 2018, 6:00 AM IST

mallikarjun-kharge.jpg

ಹೊಸದಿಲ್ಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನಲ್ಲಿ ನುಸುಳಿರುವ ತಪ್ಪಿನ ಬಗ್ಗೆ ಅಟಾರ್ನಿ ಜನರಲ್‌ ಹಾಗೂ ಮಹಾಲೇಖಪಾಲರನ್ನು ವಿಚಾರಣೆ ನಡೆಸುವ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧಾರಕ್ಕೆ ಸದಸ್ಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಇದರಿಂದ ಸುಪ್ರೀಂಕೋರ್ಟ್‌ ತೀರ್ಪನ್ನೇ ಪ್ರಶ್ನಿಸಿದಂತಾಗುತ್ತದೆ ಎಂದು ಕೆಲವು ಕಾಂಗ್ರೆಸ್‌ ಸದಸ್ಯರೂ ಆಕ್ಷೇಪಿಸಿದ್ದಾರೆ ಎನ್ನಲಾಗಿದೆ.

ರಫೇಲ್‌ ಒಪ್ಪಂದದ ಬೆಲೆ ವಿವರಗಳನ್ನು ಸಿಎಜಿಗೆ ನೀಡಲಾಗಿದ್ದು, ಸಿಎಜಿ ತನ್ನ ವರದಿ ಯನ್ನು ಪಿಎಸಿಗೆ ಸಲ್ಲಿಸಿದೆ. ಈ ಸಮಿತಿಯು ಸಂಸತ್ತಿ ನಲ್ಲಿ ವರದಿ ಮಂಡಿಸಿದೆ ಎಂದು ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖೀಸಲಾಗಿದೆ. ಆದರೆ ವಾಸ್ತವದಲ್ಲಿ ಸಿಎಜಿ ತನ್ನ ವರದಿಯನ್ನು ಪಿಎಸಿಗೆ ಇನ್ನೂ ಸಲ್ಲಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ. 

ಈ ಮಧ್ಯೆ ಇದು ವ್ಯಾಕರಣ ದೋಷವಾಗಿದ್ದು, ತೀರ್ಪು ಪರಿಷ್ಕರಿಸಬೇಕೆಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

ಅಟಾರ್ನಿ ಜನರಲ್‌ ಹಾಗೂ ಮಹಾಲೇಖ ಪಾಲ ರನ್ನು ಪಿಎಸಿ ಮುಖ್ಯಸ್ಥರಾಗಿರುವ ಖರ್ಗೆ ವೈಯಕ್ತಿಕ ನೆಲೆಯಲ್ಲಿ ಕರೆಸಿ ಪ್ರಶ್ನಿಸಬಹುದು. ಆದರೆ ಇದರ ವರದಿಯನ್ನು ಮಾನ್ಯ ಮಾಡ ಲಾಗು ವುದಿಲ್ಲ. ಅಲ್ಲದೆ, ಸಿಎಜಿ ವರದಿಯೇ ಇನ್ನೂ ಪಿಎಸಿಗೆ ಸಲ್ಲಿಕೆಯಾಗಿಲ್ಲದ್ದರಿಂದ ಅವ ರನ್ನು ಪ್ರಶ್ನಿಸಲು ಅನುಮತಿ ನೀಡಲಾಗದು ಎಂದು ಸದಸ್ಯರು ಹೇಳಿದ್ದಾರೆ.

ತೀರ್ಪು ವಾಪಸ್‌ ಪಡೆಯಲಿ: ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ವಾಪಸ್‌ ಪಡೆಯ ಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಅಲ್ಲದೆ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಮತ್ತು ಮೋಸದ ಆರೋಪ ಹೊರಿಸಬೇಕು. ಇದರೊಂದಿಗೆ ಇಡೀ ಪ್ರಕರಣವನ್ನು ಪುನಃ ವಿಚಾರಣೆ ನಡೆಸಿ ತೀರ್ಪು ನೀಡಬೇಕು ಎಂದು ಕಾಂಗ್ರೆಸ್‌ ನಾಯಕ ಆನಂದ್‌ ಶರ್ಮಾ ಆಗ್ರಹಿಸಿದ್ದಾರೆ. ಈ ವಿಚಾರ ವನ್ನು ಚರ್ಚೆ ಮಾಡಲು ಕೋರ್ಟ್‌ ಸೂಕ್ತ ವೇದಿಕೆಯಲ್ಲ. ಸಾರ್ವಜನಿಕ ಖಾತೆ ಸಮಿತಿಯು ಈ ವಿಚಾರವನ್ನು ಚರ್ಚೆ ನಡೆಸಬಹುದಾಗಿದೆ. ಸರ್ಕಾರ ತಪ್ಪು ಮಾಹಿತಿ ನೀಡಿದ್ದರಿಂದ ತೀರ್ಪಿನ ಮೇಲೆ ಪರಿಣಾಮ ಬೀರಿದೆ ಎಂದು ಶರ್ಮಾ ಹೇಳಿದ್ದಾರೆ. ಈ ನಡುವೆ, ರಫೇಲ್‌ ವಿವಾದವನ್ನು ಜಿಪಿಸಿ ತನಿಖೆಗೆ ವಹಿಸುವುದಿಲ್ಲ ಎಂದು ಸಚಿವ ಜೇಟಿÉ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು

ಗುಣಮಟ್ಟದ ಉನ್ನತ ಶಿಕ್ಷಣವು ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ವಿಶಿಷ್ಟ ಲಕ್ಷಣ-ಉಪರಾಷ್ಟ್ರಪತಿ

Covidಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,156ಕೋವಿಡ್ ಪ್ರಕರಣ ಪತ್ತೆ, 733 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,156ಕೋವಿಡ್ ಪ್ರಕರಣ ಪತ್ತೆ, 733 ಮಂದಿ ಸಾವು

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Vehicle parking

ವಾಹನ ನಿಲುಗಡೆಗೆ ಶುಲ್ಕ

shivamogga news

ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.