ರಫೇಲ್: ಕಳವಲ್ಲ, ನಕಲು ಪ್ರತಿ
Team Udayavani, Mar 9, 2019, 12:30 AM IST
ಹೊಸದಲ್ಲಿ: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ 3 ಮಹತ್ವದ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳುವಾಗಿವೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಶುಕ್ರ ವಾರ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಅಸಲಿಗೆ, ರಕ್ಷಣಾ ಇಲಾಖೆಯಿಂದ ಆ ದಾಖಲೆಗಳು ಕಳವಾಗಿಲ್ಲ. ಆದರೆ, ಅವುಗಳ ಫೋಟೋ ಕಾಪಿಯನ್ನು ಫಿರ್ಯಾದು ದಾರರು ತಮ್ಮ ದಾಖಲೆಗಳೊಂದಿಗೆ ಕೋರ್ಟ್ಗೆ ಸಲ್ಲಿಸಿದ್ದಾರೆ. ಆದರೆ, ಇದೂ ಅಧಿಕೃತ ರಹಸ್ಯ ಕಾಯ್ದೆಯ ಉಲ್ಲಂಘನೆ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸರಕಾರದ ಕೆಲವು ಹಿರಿಯ ಅಧಿಕಾರಿಗಳು, ಕೋರ್ಟ್ನಲ್ಲಿ ಅಟಾರ್ನಿ ಜನರಲ್ “ಕಳವು’ ಎಂಬ ಪದಪ್ರಯೋಗದ ಬದಲು ಬೇರೆ ಪದವನ್ನು ಬಳಸಬಹುದಿತ್ತು ಎಂದಿದ್ದಾರೆ.
ಇದೇ ವೇಳೆ, “ದ ಹಿಂದೂ’ ಪತ್ರಿಕೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದ ಎಜಿ ವಿರುದ್ಧ ಭಾರತೀಯ ದಿನಪತ್ರಿಕೆಗಳ ಸೊಸೈಟಿ (ಐಎನ್ಎಸ್) ಕಿಡಿಕಾರಿದೆ. ಪತ್ರಿಕೆಗಳಿಗೆ ವರದಿ ಮಾಡುವ ಸ್ವಾತಂತ್ರ್ಯ ಕಿತ್ತುಕೊಳ್ಳಬಹುದಾದ ಅಧಿಕೃತ ರಹಸ್ಯ ಕಾಯ್ದೆಯೇ ರದ್ದಾಗಬೇಕು ಎಂದು ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ