ವೈದ್ಯ ಕಾಲೇಜಲ್ಲಿ ರ‍್ಯಾಗಿಂಗ್‌

ತಲೆ ಬೋಳಿಸಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

Team Udayavani, Aug 22, 2019, 5:29 AM IST

ಹೊಸದಿಲ್ಲಿ: ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸಿಫಾಯ್‌ನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರ‍್ಯಾಗಿಂಗ್‌ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅಲ್ಲಿನ ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡಿರುವ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌ ಹೆಸರಲ್ಲಿ ಸಾಮೂಹಿಕವಾಗಿ ತಲೆಬೋಳಿಸುವಂತೆ ಮಾಡಿದ್ದಾರೆ.

ಅದರಂತೆ, ಕಿರಿಯ ವಿದ್ಯಾರ್ಥಿಗಳು ತಲೆ ಬೋಳಿಸಿಕೊಂಡು, ಬಿಳಿ ಬಣ್ಣದ ಜುಬ್ಟಾ-ಪೈಜಾಮ ಧರಿಸಿ ಕಾಲೇಜು ಕ್ಯಾಂಪಸ್ಸಿನಲ್ಲಿ ಸಾಲಾಗಿ ನಡೆದಿದ್ದಾರೆ. ಅವರೆಲ್ಲರೂ ಶಿರಬಾಗಿ ತಮಗೆ ನಮಿಸುವಂತೆಯೂ ಹಿರಿಯ ವಿದ್ಯಾರ್ಥಿಗಳು ಸೂಚಿಸಿದ್ದಾರೆ. ಮಾಧ್ಯಮಗಳಲ್ಲಿ ಇದು ದೊಡ್ಡ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಕೊಂಡಿರುವ ಸಂಸ್ಥೆಯ ಆಡಳಿತ ಮಂಡಳಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳು ವುದಾಗಿ ಹೇಳಿದ್ದಾರೆ. ದುರದೃಷ್ಟವಶಾತ್‌, ರ್ಯಾಗಿಂಗ್‌ ಮಾಡುವವರಿಗೆ ಪಾಠ ಕಲಿಸಲು, ಮೊದಲ ವರ್ಷದ ವಿದ್ಯಾರ್ಥಿಗಳ ನಡುವೆ ಒಬ್ಬನೇ ಒಬ್ಬ “ಮುನ್ನಾಭಾಯಿ’ ಅಥವಾ ತ್ರೀ ಈಡಿಯಟ್ಸ್‌ನ “ಫ‌ುನ್ಸುಕ್‌ ವಾಂಗುx’ ಮಾದರಿಯ ಧೈರ್ಯವಂತ ಇರಲಿಲ್ಲ ಎನ್ನುವುದು ಬೇಸರದ ಸಂಗತಿ


ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ