ಕ್ಷಮೆಗೆ ರಾಹುಲ್‌ ಒಪ್ಪಿಗೆ

Team Udayavani, May 1, 2019, 6:00 AM IST

PTI4_30_2019_000081B

ಹೊಸದಿಲ್ಲಿ: ರಫೇಲ್‌ ಕುರಿತ ತೀರ್ಪಿನಲ್ಲಿ “ಚೌಕಿದಾರ್‌ ಚೋರ್‌ ಹೇ’ ಎಂದು ಸರ್ವೋಚ್ಚ ನ್ಯಾಯಾಲಯವೇ ಹೇಳಿದೆ ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆಯ ಬಿಸಿ ಎದುರಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೊನೆಗೂ ಕ್ಷಮೆಯಾಚಿಸಲು ಒಪ್ಪಿಕೊಂಡಿದ್ದಾರೆ.

2ನೇ ಬಾರಿ ಅಫಿದವಿತ್‌ ಸಲ್ಲಿಸಿದರೂ ಅದರಲ್ಲೂ ತಪ್ಪನ್ನು ಒಪ್ಪಿ ಕ್ಷಮೆ ಕೋರದ ರಾಹುಲ್‌ರನ್ನು ಸುಪ್ರೀಂ ಕೋರ್ಟ್‌ನಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ನ್ಯಾಯಪೀಠ ಮಂಗಳವಾರದ ವಿಚಾರಣೆ ವೇಳೆ ತೀವ್ರ ತರಾಟೆಗೆ ತೆಗೆದುಕೊಂಡಿತು.

“ನೀವು ತಪ್ಪು ಮಾಡಿದ ಮೇಲೆ, ಅದನ್ನು ತಪ್ಪೆಂದು ಒಪ್ಪಿಕೊಳ್ಳಬೇಕು’ ಎಂದ ನ್ಯಾಯಪೀಠ, ನಿಮ್ಮ ರಾಜಕೀಯ ನಿಲುವನ್ನು ನೀವೇ ಇಟ್ಟುಕೊಳ್ಳಿ. ಕ್ಷಮೆ ಕೇಳಿ ಹೊಸ ಅಫಿದವಿತ್‌ ಸಲ್ಲಿಸಿ ಎಂದೂ ಆದೇಶಿಸಿತು. ಇದಕ್ಕೆ ರಾಹುಲ್‌ ಒಪ್ಪಿ ಕೊಂಡಿದ್ದು, ಹೊಸ ಅಫಿದವಿತ್‌ ಸಲ್ಲಿಸುವುದಾಗಿ ತಿಳಿಸಿ ದ್ದಾರೆ. ಹೊಸ ಅಫಿದವಿತ್‌ ಸಲ್ಲಿಸಿದರೆ ಈ ಪ್ರಕರಣದಲ್ಲಿ ರಾಹುಲ್‌ ಸಲ್ಲಿಸುತ್ತಿರುವ ಮೂರನೇ ಅಫಿದವಿತ್‌ ಇದಾಗಲಿದೆ.

ನ್ಯಾಯಪೀಠ ಹೇಳಿದ್ದೇನು?
ವಿಚಾರಣೆಯ ವೇಳೆ ರಾಹುಲ್‌ ಪರ ವಕೀಲ ಅಭಿಷೇಕ್‌ ಮನು ಸಿಂ Ì ಅವರು, ರಾಹುಲ್‌ ಹೇಳಿಕೆ ತಪ್ಪಾಗಿರುವುದು ನಿಜ ಎಂದು ಹೇಳಿದರು. ಆಗ ಅಫಿದವಿತ್‌ನಲ್ಲಿನ ಗೊಂದಲ ಕುರಿತು ಉಲ್ಲೇಖೀಸಿದ ನ್ಯಾಯಪೀಠ, ನೀವು ಅಫಿದವಿತ್‌ನಲ್ಲಿ ಒಂದು ಕಡೆ ತಪ್ಪು ಮಾಡಿದ್ದಾಗಿ ಉಲ್ಲೇಖೀಸಿದರೆ, ಮತ್ತೂಂದು ಕಡೆ ನ್ಯಾಯಾಂಗ ನಿಂದನಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದೀರಿ. ನೀವು ನಿಜಕ್ಕೂ ಹೇಳಲು ಬಯಸುತ್ತಿರುವು ದಾದರೂ ಏನು ಎಂಬುದನ್ನು ಅರ್ಥಮಾಡಿಕೊಳ್ಳಲು ನಮಗೆ ಕಷ್ಟವಾಗುತ್ತಿದೆ ಎಂದು ಹೇಳಿತು. ಅಲ್ಲದೆ, ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಲು ನೀವು 22 ಪುಟಗಳ ಅಫಿದವಿತ್‌ ಸಲ್ಲಿಸುತ್ತೀರಿ. ಆದರೆ ಅದರಲ್ಲಿ ಸಂಪೂರ್ಣವಾದ ವಿಷಾದ ಎಲ್ಲಿದೆ? ಅಫಿದವಿತ್‌ನಲ್ಲಿ ನೀವು “ರಿಗ್ರೆಟ್‌'(ವಿಷಾದ) ಎಂಬ ಪದವನ್ನು ಆವರಣದಲ್ಲಿ ಬರೆದಿದ್ದೀರಿ. ಅದರ ಅರ್ಥವೇನು ಎಂದು ನ್ಯಾಯಪೀಠ ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಂ Ì, “ವಿಷಾದ ಎಂದರೆ ಕ್ಷಮೆ ಎಂದೇ ಅರ್ಥ. ನಾನು ಈಗಾಗಲೇ ಡಿಕ್ಷನರಿಯಲ್ಲಿ ಅದನ್ನು ಪರಿಶೀಲಿಸಿದ್ದೇನೆ’ ಎಂದರು. ಆದರೆ ಅವರ ಈ ಹೇಳಿಕೆಯು ನ್ಯಾಯಪೀಠದ ಮನವೊಲಿಸುವಲ್ಲಿ ವಿಫ‌ಲವಾಯಿತು. ಕೊನೆಗೆ ಸಿಂ Ì ಅವರು, “ರಾಹುಲ್‌ ಗಾಂಧಿ ಪ್ರಾಮಾಣಿಕವಾಗಿ ಸುಪ್ರೀಂ ಕೋರ್ಟ್‌ನ ಕ್ಷಮೆ ಕೇಳುವ ಹೊಸ ಅಫಿದವಿತ್‌ ಅನ್ನು ಮುಂದಿನ ಸೋಮವಾರದೊಳಗೆ ಸಲ್ಲಿಸುತ್ತೇವೆ’ ಎಂದು ಹೇಳಿದರು.

ಇದಕ್ಕೆ “ಈ ಪ್ರಕರಣವನ್ನು ಎಷ್ಟು ದಿನಗಳವರೆಗೆ ಎಳೆಯುತ್ತೀರಿ’ ಎಂದು ಪ್ರಶ್ನಿಸಿದ ನ್ಯಾಯಪೀಠ, ಅನಂತರ ರಾಹುಲ್‌ಗೆ ಹೊಸ ಅಫಿದವಿತ್‌ ಸಲ್ಲಿಸಲು ಅವಕಾಶ ನೀಡಿ, ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿತು.

ರಾಹುಲ್‌ ಪೌರತ್ವ ನೋಟಿಸ್‌
ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಮತ್ತೆ ಪೌರತ್ವದ ಕಾಟ ಕಾಡಲು ಶುರುವಾಗಿದೆ. ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅವರು ರಾಹುಲ್‌ ಪೌರತ್ವದ ಕುರಿತಂತೆ ಪ್ರಶ್ನೆ ಎತ್ತಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರತಿಕ್ರಿಯೆ ಕೇಳಿ ರಾಹುಲ್‌ಗೆ ನೋಟಿಸ್‌ ಜಾರಿ ಮಾಡಿದೆ.

ಇನ್ನು 15 ದಿನಗಳಲ್ಲಿ ಸ್ಪಷ್ಟವಾದ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ. ಈ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ವಾಕ್ಸಮರ ನಡೆದಿದೆ. ರಾಹುಲ್‌ ಭಾರತದ ಮಣ್ಣಲ್ಲೇ ಹುಟ್ಟಿ, ಇಲ್ಲಿಯೇ ಬೆಳೆದವರು ಎಂದು ಪ್ರಿಯಾಂಕಾ ವಾದ್ರಾ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.