
ರಾಹುಲ್ ಮತ್ತೆ ಹುಟ್ಟಿಬಂದರೂ ಸಾವರ್ಕರ್ ರಂತೆ ಆಗಲು ಸಾಧ್ಯವಿಲ್ಲ: ಅನುರಾಗ್ ಠಾಕೂರ್
Team Udayavani, Apr 2, 2023, 1:46 PM IST

ಹೊಸದಿಲ್ಲಿ: ಇನ್ನು ಹತ್ತು ಪುನರ್ಜನ್ಮ ಪಡೆದು ಬಂದರೂ ರಾಹುಲ್ ಗಾಂಧಿ ಅವರು ಸಾವರ್ಕರ್ ರೀತಿ ಆಗಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದರು.
‘ಮೋದಿ ಉಪನಾಮ’ ಟೀಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಮಾರ್ಚ್ 25 ರಂದು “ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ, ಗಾಂಧಿಗಳು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ಹೇಳಿದ್ದರು.
ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಟಿಒ ಅಹಿಂಸಾ ಓಟದಲ್ಲಿ ಎಎನ್‌ಐ ಜೊತೆ ಮಾತನಾಡಿದ ಅನುರಾಗ್ ಠಾಕೂರ್, ಸಾವರ್ಕರ್ ಅವರನ್ನು ಅವಮಾನಿಸಿದ ರಾಹುಲ್ ಗಾಂಧಿಯನ್ನು ದೇಶ ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ನ ಶಿವಲಿಂಗೇಗೌಡ
“ಸಾವರ್ಕರ್ ಗೆ ಮಾಡಿದ ಅವಮಾನವನ್ನು ದೇಶವು ಎಂದಿಗೂ ಕ್ಷಮಿಸುವುದಿಲ್ಲ, ರಾಹುಲ್ ಗಾಂಧಿ ಅವರು 10 ಜನ್ಮಗಳನ್ನು ಪಡೆದು ಬಂದರೂ ಸಾವರ್ಕರ್ ಆಗಲು ಸಾಧ್ಯವಿಲ್ಲ, ಸಾವರ್ಕರ್ ಅವರು ತಮ್ಮ ಇಡೀ ಜೀವನವನ್ನು ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟರು. ರಾಹುಲ್ ಗಾಂಧಿ ಅವರು ಬ್ರಿಟಿಷರ ಸಹಾಯದಿಂದ ಭಾರತೀಯ ಪ್ರಜಾಪ್ರಭುತ್ವದ ವಿರುದ್ಧ ಅಭಿಯಾನ ಮಾಡುತ್ತಾ ತಮ್ಮ ಇಡೀ ಸಮಯವನ್ನು ಕಳೆಯುತ್ತಿದ್ದಾರೆ” ಅವರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
