ಬೇರೆಯವರ ಬಾತ್ ರೂಂ ಇಣುಕಿ ನೋಡೋದು ಪ್ರಧಾನಿಗೆ ಇಷ್ಟ! ರಾಹುಲ್
Team Udayavani, Feb 11, 2017, 3:26 PM IST
ಲಕ್ನೋ:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ರೇನ್ ಕೋಟ್ ಹಾಕಿ ಸ್ನಾನ ಮಾಡೋದು ಗೊತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಬೇರೆಯವರ ಸ್ನಾನಗೃಹ ಇಣುಕಿ ನೋಡುವುದು ಇಷ್ಟದ ಕೆಲಸವಾಗಿದೆ ಎಂದು ಹೇಳಿದ್ದಾರೆ.
ಶನಿವಾರ ರಾಹುಲ್ ಗಾಂಧಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜೊತೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ(ಸಿಎಂಪಿ) ಬಿಡುಗಡೆಗೊಳಿಸಿ ಮಾತನಾಡಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೂಗಲ್ ನಲ್ಲಿ ಹುಡುಕಾಟ ನಡೆಸುವುದು, ಬೇರೆಯವರ ಬಾತ್ ರೂಂ ಇಣುಕಿ ನೋಡುವುದೇ ಅವರ ಇಷ್ಟದ ಕೆಲಸವಾಗಿದೆ. ಅವರು ಅದನ್ನು ಸಮಯವಿದ್ದಾಗ ಮಾಡಲಿ, ಆದರೆ ಅವರ ಮುಖ್ಯ ಕೆಲಸ ಪ್ರಧಾನಿಯಾಗಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ಇತ್ತೀಚೆಗೆ ಪ್ರಧಾನಿ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡುತ್ತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ರೇನ್ ಕೋಟ್ ಉಪಮೆ ಉಪಯೋಗಿಸಿ ಟೀಕಿಸಿದ್ದರು, ಬಳಿಕ ಉತ್ತರಪ್ರದೇಶದಲ್ಲಿ ಮಾತನಾಡುತ್ತ, ಗೂಗಲ್ ಸರ್ಜ್ ಮಾಡಿದರೆ ಒಬ್ಬ ಕಾಂಗ್ರೆಸ್ ಮುಖಂಡನ ಬಗ್ಗೆಯೇ ಹೆಚ್ಚು ಜೋಕ್ಸ್ ಗಳು ಸಿಗುತ್ತದೆ ಎಂದು ವ್ಯಂಗ್ಯವಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !