Rahul Navin: ಜಾರಿ ನಿರ್ದೇಶನಾಲಯದ ಪ್ರಭಾರ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ
Team Udayavani, Sep 16, 2023, 9:13 AM IST
ನವದೆಹಲಿ: ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗಿರುವ ರಾಹುಲ್ ನವೀನ್ ಅವರನ್ನು ಜಾರಿ ನಿರ್ದೇಶನಾಲಯದ ಹಂಗಾಮಿ ನಿರ್ದೇಶಕರಾಗಿ ಕೇಂದ್ರ ಸರಕಾರ ನೇಮಿಸಿದೆ.
ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳುತ್ತಿದ್ದು ಹಾಗಾಗಿ ಅವರ ಸ್ಥಾನಕ್ಕೆ ಪೂರ್ಣಪ್ರಮಾಣದ ಅಧಿಕಾರಿಗಳು ನೇಮಕಗೊಳ್ಳುವ ವರೆಗೆ ರಾಹುಲ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ಕೇಂದ್ರ ನೇಮಿಸಿದೆ.
1984 ರ ಬ್ಯಾಚ್ನ ಐಆರ್ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಅವರ ಬದಲಿಗೆ 1993-ಬ್ಯಾಚ್ನ ಐಆರ್ಎಸ್ ಅಧಿಕಾರಿ ರಾಹುಲ್ ನವೀನ್ ಇಡಿ ಹಾಲಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ನೇಮಕಾತಿಯೊಂದಿಗೆ ರಾಹುಲ್ ನವೀನ್ ಅವರು ಕೇಂದ್ರ ತನಿಖಾ ಸಂಸ್ಥೆಯ ಅತ್ಯಂತ ಹಿರಿಯ ಅಧಿಕಾರಿಯಾಗಲಿದ್ದಾರೆ ಎನ್ನಲಾಗಿದೆ. ಅಲ್ಲದೆ ನವೀನ್ ಇಡಿ ಪ್ರಧಾನ ಕಚೇರಿಯ ಮುಖ್ಯ ವಿಜಿಲೆನ್ಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: Charmadi Ghat: ದಟ್ಟ ಮಂಜು: ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ…