ಪ್ರಧಾನಿಯಾಗುವ ಮುನ್ನ ರಾಹುಲ್ ರಾಜ್ಯ ಚುನಾವಣೆ ಗೆಲ್ಲಲಿ: ಬಿಜೆಪಿ
Team Udayavani, May 8, 2018, 5:32 PM IST
ಹೊಸದಿಲ್ಲಿ : ದೇಶದ ಪ್ರಧಾನಿಯಾಗಲು ತಾನು ಸಿದ್ಧ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿರುವುದನ್ನು ಕಟುವಾಗಿ ಟೀಕಿಸಿರುವ ಬಿಜೆಪಿ, “ರಾಹುಲ್ ಅವರು ದೇಶದ ಪ್ರಧಾನಿಯಾಗುವ ಮೊದಲು ರಾಜ್ಯದ ವಿಧಾನಸಭಾ ಚುನಾವಣೆಗಳನ್ನು ಗೆದ್ದು ತೋರಿಸಬೇಕು; ಕೇವಲ ದೊಡ್ಡ ದೊಡ್ಡ ಕನಸುಗಳನ್ನು ಇಟ್ಟುಕೊಂಡರೆ ಸಾಲದು’ ಎಂದು ವ್ಯಂಗ್ಯವಾಡಿದೆ.
ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ದೇಶಧ ಪ್ರಧಾನಿಯಾಗುವಂತಹ ದೊಡ್ಡ ದೊಡ್ಡ ಕನಸುಗಳನ್ನು ಕಾಣುವ ಹಕ್ಕು ರಾಹುಲ್ ಗಾಂಧಿ ಅವರಿಗಿದೆ. ಆದರೆ ಕಾಂಗ್ರೆಸ್ ಮೈತ್ರಿಕೂಟದವರೇ ರಾಹುಲ್ ಅವರ ನಾಯಕತ್ವವನ್ನು ಒಪ್ಪುತ್ತಿಲ್ಲ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಉಪಾಧ್ಯಕ್ಷರಾದ ಬಳಿಕ ಅವರ ಪಕ್ಷ 13 ರಾಜ್ಯಗಳಲ್ಲಿನ ಚುನಾವಣೆಗಳನ್ನು ಸೋತಿದೆ; ರಾಹುಲ್ ಅವರು ಪಕ್ಷದ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಐದು ರಾಜ್ಯಗಳಲ್ಲಿ ಸೋತಿದೆ; ಈಗ ಕರ್ನಾಟಕವು ಆರನೇಯದ್ದಾಗಿದೆ’ ಎಂದು ಹೇಳಿದರು.
“ಇದೆಂತಹ ವಿಪರ್ಯಾಸ ನೋಡಿ; ರಾಹುಲ್ ಗಾಂಧಿ ಅವರು ಪಕ್ಷದ ಉಪಾಧ್ಯಕ್ಷರಾದ ಬಳಿಕ ಮತ್ತು ಅಧ್ಯಕ್ಷರಾದ ಬಳಿಕ ನಿರಂತರವಾಗಿ 18 ರಾಜ್ಯಗಳಲ್ಲಿನ ಚುನಾವಣೆಗಳನ್ನು ಸೋತಿದೆ; ಆದರೂ ಅವರು ದೇಶದ ಪ್ರಧಾನಿಯಾಗುವ ಕನಸನ್ನು ಕಾಣುತ್ತಾರೆ. ಕಾಂಗ್ರೆಸ್ ಮಿತ್ರ ಪಕ್ಷಗಳು ಕೂಡ ರಾಹುಲ್ ಅವರ ನಾಯಕತ್ವವನ್ನು ಒಪ್ಪುತ್ತಿಲ್ಲ’ ಎಂದ ಹುಸೇನ್ ಹೇಳಿದರು.
2019ರ ಮಹಾ ಚುನಾವಣೆಯಲ್ಲಿ ದೇಶದ ಜನರು ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಚುನಾಯಿಸಲಿದ್ದಾರೆ ಎಂದು ಹುಸೇನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ