ರಾಜಸ್ಥಾನ: ಸ್ಥಳೀಯ ನಗರ ಸಂಸ್ಥೆ ಚುನಾವಣೆ, ಕಾಂಗ್ರೆಸ್ ಭರ್ಜರಿ ಗೆಲುವು, ಬಿಜೆಪಿಗೆ ಹಿನ್ನಡೆ
ಬಹುಜನ್ ಸಮಾಜ ಪಕ್ಷದ ಸದಸ್ಯರು 7 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿರುವುದಾಗಿ ವರದಿ ತಿಳಿಸಿದೆ.
Team Udayavani, Dec 14, 2020, 10:37 AM IST
ಜೈಪುರ್: ಇತ್ತೀಚೆಗೆ ನಡೆದ ರಾಜಸ್ಥಾನದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿತ್ತು. ಏತನ್ಮಧ್ಯೆ ಭಾನುವಾರ(ಡಿಸೆಂಬರ್ 13, 2020)ನಡೆದ ಸ್ಥಳೀಯ ನಗರ ಸಂಸ್ಥೆ (ಯುಎಲ್ ಬಿ) ಚುನಾವಣೆಯಲ್ಲಿ 619 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದು, ಇದರೊಂದಿಗೆ ಬಿಜೆಪಿಯನ್ನು ಸೋಲಿಸಿದೆ ಎಂದು ವರದಿ ತಿಳಿಸಿದೆ.
ಭಾನುವಾರ ಘೋಷಣೆಯಾದ ಫಲಿತಾಂಶದ ಪ್ರಕಾರ 12 ಜಿಲ್ಲಗಳ 50 ಸ್ಥಳೀಯ ನಗರ ಸಂಸ್ಥೆಯ 1,775 ವಾರ್ಡ್ಸ್ ಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ 619 ವಾರ್ಡ್ ಗಳಲ್ಲಿ ಮತ್ತು ಬಿಜೆಪಿ 548 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 596 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಹುಜನ್ ಸಮಾಜ ಪಕ್ಷದ ಸದಸ್ಯರು 7 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪುಷ್ಪಗಿರಿ ತಪ್ಪಲಿನಲ್ಲೂ ಭಾರೀ ಶಬ್ಧ-ಕಂಪನ ವಿಸ್ತರಣೆ: ಮುಂದುವರೆದ ಕುತೂಹಲ !
ಇತ್ತೀಚೆಗೆ ನಡೆದ ಪಂಚಾಯತ್ ರಾಜ್ ಚುನಾವಣೆಯಲ್ಲಿ ಬಿಜೆಪಿ 12 ಜಿಲ್ಲಾ ಪರಿಷತ್ ನಲ್ಲಿ ಗೆದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇವಲ ಐದು ಜಿಲ್ಲಾ ಪರಿಷತ್ ನಲ್ಲಿ ಜಯಗಳಿಸುವ ಮೂಲಕ ಮುಖಭಂಗ ಅನುಭವಿಸಿತ್ತು.
ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಪ್ರದರ್ಶನ ತೋರಿದ್ದು, ಹೆಚ್ಚು ಸ್ಥಾನ ಗಳಿಸಿರುವುದು ಸಂತೋಷ ತಂದಿದೆ ಎಂದು ರಾಜಸ್ಥಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ