ವಿಶ್ವಬ್ಯಾಂಕ್ ನಿರ್ದೇಶಕರಾಗಿ ರಾಜೇಶ್
Team Udayavani, Sep 15, 2020, 6:26 AM IST
ನವದೆಹಲಿ: ಭಾರತದ ಹಿರಿಯ ಅಧಿಕಾರಿ ರಾಜೇಶ್ ಖುಲ್ಲರ್, ವಾಷಿಂಗ್ಟನ್ನಲ್ಲಿರುವ ವಿಶ್ವ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಹೀಗೆಂದು ಕೇಂದ್ರ ಸಿಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. 1988ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಖುಲ್ಲರ್, ಪ್ರಸ್ತುತ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.
ವಿಶ್ವಬ್ಯಾಂಕ್ನಲ್ಲಿ 2023, ಆ.31ರ ವರೆಗೆ ಅವರ ಅಧಿಕಾರಾವಧಿಯಿರುತ್ತದೆ. ಸಿಬಂದಿ ಸಚಿವಾಲಯದ ಇನ್ನೊಂದು ಆದೇಶದಲ್ಲಿ, ಮನಿಲಾದಲ್ಲಿರುವ ಏಷ್ಯಾ ಅಭಿವೃದ್ಧಿ ಬ್ಯಾಂಕ್ ನ (ಎಡಿಬಿ) ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಸಮೀರ್ ಕುಮಾರ್ ಖರೆಯನ್ನು ನೇಮಿಸಲಾಗಿದೆ ಎಂದು ತಿಳಿಸಲಾಗಿದೆ. ಇವರ ಅಧಿಕಾರಾವಧಿಯೂ 3 ವರ್ಷವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ