ರಾಜ್ಯಸಭಾ ಚುನಾವಣೆ ಮುಂದೂಡಲು ಆಯೋಗ ನಿರ್ಧಾರ
Team Udayavani, Mar 25, 2020, 10:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಮಾ. 26ರಂದು ನಿಗದಿಯಾಗಿದ್ದ ರಾಜ್ಯಸಭಾ ಚುನಾವಣೆಯನ್ನು ಮುಂದೂಡಿರುವುದಾಗಿ ಚುನಾವಣ ಆಯೋಗ ಮಂಗಳವಾರ ತಿಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳುವ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹೊಣೆಗಾರಿಕೆ ಎಲ್ಲರ ಮೇಲಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಾ. 31ರ ಅನಂತರ ಚುನಾವಣೆಯ ದಿನಾಂಕದ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಚುನಾವಣಾ ಆಯುಕ್ತರಾದ ಅಶೋಕ್ ಲಾವಸ ಮತ್ತ ಸುಶೀಲ್ ಚಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ವಿಷಮ ಪರಿಸ್ಥಿತಿಯಲ್ಲಿ ನಾವು ಶಾಸಕರನ್ನು ತೊಂದರೆಗೀಡುಮಾಡಬಾರದು. ಚುನಾವಣ ಪ್ರಕ್ರಿಯೆಗೆ ಅಗತ್ಯವಾಗಿ ಚುನಾವಣ ಅಧಿಕಾರಿಗಳು ಮತ್ತು ಸಿಬಂದಿ ಒಂದೆಡೆ ಸೇರ ಲೇಬೇಕಾಗುತ್ತದೆ.
ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಒಂದೆಡೆ ಗುಂಪು ಸೇರುವುದು ಅಪಾಯವಾದ್ದರಿಂದ ಚುನಾವಣ ಆಯೋಗ ಚುನಾವಣೆ ಮುಂದೂಡಲು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?