ಇಂದು ರಾಜ್ಯ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ?
Team Udayavani, Mar 27, 2018, 9:17 AM IST
ನವದೆಹಲಿ : ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸುವ ಸಾಧ್ಯತೆ ಇದ್ದು ಈ ಸಂಬಂಧ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.
ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಚುನಾವಣಾ ಆಯುಕ್ತರಾದ ಓಂ ಪ್ರಕಾಶ್ ರಾವತ್ ಇಂದು ಬೆಂಗಳೂರಿಗೆ ಬಂದು ಇಲ್ಲಿನ ಚುನಾವಣಾ ಆಯುಕ್ತರ ಜೊತೆ ಸಭೆ ನಡೆಸಬೇಕಿತ್ತು ಆದರೆ ಆಯುಕ್ತರು ದೆಹಲಿಯಲ್ಲೇ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಗಳು ಹೆಚ್ಚಾಗಿವೆ.
ಒಂದು ವೇಳೆ ದಿನಾಂಕ ನಿಗದಿಯಾದಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸುವ ಸಾಧ್ಯತೆಯಿದೆ.