
ಲವ್ ಜಿಹಾದ್ ವಿರುದ್ಧ ಮುಂಬೈನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ
Team Udayavani, Jan 29, 2023, 10:22 PM IST

ಮುಂಬೈ: ಲವ್ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ಧ ಮಹಾರಾಷ್ಟ್ರದ ಮುಂಬೈನಲ್ಲಿ ಸಕಲ ಹಿಂದೂ ಸಮಾಜದ ವತಿಯಿಂದ ಭಾನುವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
“ಹಿಂದೂ ಜನ ಆಕ್ರೋಶ್ ಮೋರ್ಚಾ’ ಹೆಸರಿನಲ್ಲಿ ದಾದರ್‌ನ ಶಿವಾಜಿ ಪಾರ್ಕ್‌ನಿಂದ ಪ್ರಭಾದೇವಿಯ ಕಮ್‌ಗರ್ ಮೈದಾನದವರೆಗೆ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಆರ್‌ಎಸ್‌ಎಸ್, ವಿಎಚ್‌ಪಿ, ಬಿಜೆಪಿ, ಶಿವಸೇನೆಯ ಏಕನಾಥ್ ಶಿಂಧೆ ಬಣದ ನಾಯಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಬಲವಂತದ ಮತಾಂತರ ವಿರುದ್ಧ ಹಾಗೂ ಧರ್ಮದ ಹೆಸರಿನಲ್ಲಿ ಭೂಮಿಯನ್ನು ಕಬಳಿಸುವುದರ ವಿರುದ್ಧ ಕಠಿಣ ಕಾನೂನು ತರುವಂತೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ಆಗ್ರಹಿಸಿದರು.
ಕಳೆದ ಕೆಲವು ತಿಂಗಳಲ್ಲಿ ಸಕಲ ಹಿಂದೂ ಸಮಾಜದ ವತಿಯಿಂದ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ 24ಕ್ಕೂ ಹೆಚ್ಚು ರ‍್ಯಾಲಿಗಳನ್ನು ಆಯೋಜಿಸಲಾಗಿದೆ. ಆದರೆ ಮುಂಬೈನಲ್ಲಿ ಬೃಹತ್ ರ‍್ಯಾಲಿ ಆಯೋಜಿಸಿದ್ದು ಇದೇ ಮೊದಲು.
ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿದ್ದೆಲ್ಲಾ ಉಲ್ಟಾ ಆಗಿದೆ: ಸುಧಾಕರ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Russia-Ukraine War ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸಿದ ರಾಹುಲ್ ಗಾಂಧಿ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್: ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

ಕಣ್ಣೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ

BJP MLA: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ