ರಾಮ, ರಾಷ್ಟ್ರ ಬಿಜೆಪಿ ಜಪ!

ರೈತರ ಆದಾಯ 3 ವರ್ಷಗಳಲ್ಲಿ ದುಪ್ಪಟ್ಟು: ಪ್ರಣಾಳಿಕೆಯಲ್ಲಿ ಭರವಸೆ

Team Udayavani, Apr 9, 2019, 6:30 AM IST

rama

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಪ್ರಣಾಳಿಕೆಯನ್ನು ಪ್ರಕಟಿಸಿರುವ ಬಿಜೆಪಿ, ರಾಮಮಂದಿರ ನಿರ್ಮಾಣ ಮತ್ತು ರಾಷ್ಟ್ರೀಯತೆ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾವಿಸಿದೆ. ರಾಷ್ಟ್ರೀಯತೆ ಎಂಬುದು ಪಕ್ಷಕ್ಕೆ ಸ್ಫೂರ್ತಿ. ಒಳಗೊಳ್ಳುವಿಕೆ, ಉತ್ತಮ ಆಡಳಿತವು ನಮ್ಮ ಮಂತ್ರ ಎಂದಿದೆ.

ಪ್ರಣಾಳಿಕೆಯಲ್ಲಿ ಹಲವು ವಿಷಯಗಳ ಬಗ್ಗೆ ಪ್ರಸ್ತಾವಿಸಲಾಗಿದ್ದು, ಉಗ್ರವಾದದ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದು, ರೈತರ ಆದಾಯವನ್ನು ಮೂರು ವರ್ಷಗಳಲ್ಲಿ ದುಪ್ಪಟ್ಟುಗೊಳಿಸುವುದೂ ಸಹಿತ ವಿವಿಧ ಭರವಸೆಗಳನ್ನು ನೀಡಲಾಗಿದೆ.

ಅಲ್ಲದೆ 2030ರ ವೇಳೆಗೆ ಭಾರತವನ್ನು ವಿಶ್ವದ ಮೂರನೇ ಅತೀ ದೊಡ್ಡ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದು ಮತ್ತು ಬಹುಚರ್ಚಿತ 370ನೇ ವಿಧಿಯನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನೂ ಪ್ರಣಾಳಿಕೆಯಲ್ಲಿ ಮಾಡಲಾಗಿದೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭಕ್ಕೂ ಮೂರು ದಿನ ಮೊದಲು, ಸೋಮವಾರ 45 ಪುಟಗಳ “ಸಂಕಲ್ಪಿತ ಭಾರತ, ಸಶಕ್ತ ಭಾರತ’ ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ದಿಲ್ಲಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.

ಎಲ್ಲ ರಾಜ್ಯಗಳ ಜತೆ ಚರ್ಚಿಸಿ ಜಿಎಸ್‌ಟಿ ಸರಳಗೊಳಿಸುವ ಪ್ರಕ್ರಿಯೆ ಮುಂದು ವರಿಸಲಾಗುತ್ತದೆ. ದೇಶದ ಸೇನೆಗೆ ಬಲ ತುಂಬಲು ರಕ್ಷಣಾ ಖರೀದಿ ಪ್ರಕ್ರಿಯೆ ಯನ್ನು ತ್ವರಿತಗೊಳಿಸಲಾಗುತ್ತದೆ. ಅಷ್ಟೇ ಅಲ್ಲ, ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಈಗಿನಂತೆಯೇ ಮುಂದು ವರಿಸಿಕೊಂಡು ಹೋಗಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.

ಸ್ವಾತಂತ್ರ್ಯದ ನೂರರ ಕನಸು
ಭಾರತ ಸ್ವಾತಂತ್ರ್ಯ ಪಡೆದು 100 ವರ್ಷ ವಾದಾಗ ಅಂದರೆ 2047ರಲ್ಲಿ ಭಾರತವು ಅಭಿ ವೃದ್ಧಿ ಹೊಂದಿದ ದೇಶವಾಗಬೇಕು ಎಂಬ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ದೇಶದ ಅಭಿವೃದ್ಧಿಗೆ 75 ಅಂಶಗಳ ಸೂತ್ರವನ್ನು ರೂಪಿ ಸಿದ್ದು, ಇದನ್ನು 2022ರ ಒಳಗೆ ಪೂರೈಸುತ್ತೇವೆ ಎಂದರು.

ಈಗಾಗಲೇ ಜನರ ಮೂಲ ಅಗತ್ಯಗಳನ್ನು ನಾವು ಪೂರೈಸಿದ್ದೇವೆ. ಇನ್ನು ನಾವು ಜನರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸಲಿದ್ದೇವೆ ಎಂದು ಮೋದಿ ಹೇಳಿದರು.

ಪ್ರಣಾಳಿಕೆಯ ಪ್ರಮುಖ ಅಂಶಗಳು
– ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ. ಉಗ್ರವಾದ ಸಂಪೂರ್ಣ ನಿರ್ಮೂಲನೆ ಯಾಗುವ ವರೆಗೂ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಸೇನೆಗೆ ಮುಕ್ತ ಅನುಮತಿ

– ಸೇನೆಗೆ ದಾಳಿ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಆಧುನಿಕ ಶಸ್ತ್ರಾಸ್ತ್ರ ಪೂರೈಕೆ

– ಈಶಾನ್ಯ ರಾಜ್ಯಗಳಲ್ಲಿ ಅಕ್ರಮ ಒಳನುಸುಳುವಿಕೆ, ವಲಸೆ ತಡೆಯಲು ಕ್ರಮ

– ಕಿಸಾನ್‌ ಸಮ್ಮಾನ್‌ ನಿಧಿ ಅಡಿಯಲ್ಲಿ ರೈತರಿಗೆ ವಾರ್ಷಿಕ 6 ಸಾವಿರ ರೂ. ಆದಾಯ ಬೆಂಬಲ

– 2022ರ ವೇಳೆಗೆ ರೈತರ ಆದಾಯ ದುಪ್ಪಟ್ಟುಗೊಳಿಸಲು ಬದ್ಧ

– ಸಣ್ಣ ರೈತರಿಗೆ ಪಿಂಚಣಿ ಯೋಜನೆ ಘೋಷಣೆ

– ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 1 ಲಕ್ಷ ರೂ.ವರೆಗೆ ಅಲ್ಪಾವಧಿ ಕೃಷಿ ಸಾಲ

– ರಕ್ಷಣಾ ಸಲಕರಣೆಗಳ ದೇಸಿ ಉತ್ಪಾದನೆ ಪ್ರೋತ್ಸಾಹಿಸಿ ರಕ್ಷಣೆಯಲ್ಲಿ ಮೇಕ್‌ ಇನ್‌ ಇಂಡಿಯಾಗೆ ಹೆಚ್ಚಿನ ಉತ್ತೇಜನ

– ರಾಮಮಂದಿರ ನಿರ್ಮಾಣಕ್ಕೆ ಬದ್ಧ. ಈ ನಿಟ್ಟಿನಲ್ಲಿ ತ್ವರಿತ ಕ್ರಮ ಕೈಗೊಳ್ಳಲು ಸರ್ವ ಪ್ರಯತ್ನ

– ಕಲಂ 370 ರದ್ದುಗೊಳಿಸುವ ನಿಟ್ಟಿನಲ್ಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ

– ಕಾಶ್ಮೀರಿ ಪಂಡಿತರನ್ನು ಸುರಕ್ಷಿತವಾಗಿ ವಾಪಸ್‌ ಕರೆಸಿ ನೆಲೆ ಒದಗಿಸಿಕೊಡುವ ಪ್ರಯತ್ನ

– 2022ರ ವೇಳೆಗೆ ಆಶ್ರಯ ಅಡಿಯಲ್ಲಿ ಎಲ್ಲ ಕುಟುಂಬಗಳಿಗೂ ಪಕ್ಕಾ ಮನೆ

– 2024ರ ವೇಳೆಗೆ ಸುಜಲ ಯೋಜನೆ ಅಡಿಯಲ್ಲಿ ಎಲ್ಲ ಮನೆಗಳಿಗೂ ಪೈಪ್‌ ಮೂಲಕ ನೀರು

– ಮಾಹಿತಿಯಿಂದ ಸಶಕ್ತೀಕರಣ – 2022ರ ವೇಳೆಗೆ ಪ್ರತಿ ಗ್ರಾಮ ಪಂಚಾಯತ್‌ಗೂ ಹೈ ಸ್ಪೀಡ್‌ ಫೈಬರ್‌ ನೆಟ್‌ವರ್ಕ್‌ ಸಂಪರ್ಕ

– ರಸ್ತೆಯಿಂದ ಸಮೃದ್ಧಿ – ಶಿಕ್ಷಣ, ಆರೋಗ್ಯ ಕೇಂದ್ರ ಮತ್ತು ಮಾರುಕಟ್ಟೆಗಳಿಗೆ ಹಳ್ಳಿಗಳನ್ನು ಸಂಪರ್ಕಿಸುವ ಗ್ರಾಮೀಣ ರಸ್ತೆ ಸುಧಾರಣೆ

– ಸ್ವತ್ಛತೆಯಿಂದ ಸಂಪನ್ನತೆ – ಶೇ. 100ರಷ್ಟು ದ್ರವ ತ್ಯಾಜ್ಯ ವಿಲೇ ಮತ್ತು ತ್ಯಾಜ್ಯ ನೀರಿನ ಮರುಬಳಕೆ

370ನೇ ವಿಧಿಯನ್ನು ರದ್ದುಗೊಳಿಸಿದರೆ ಕಾಶ್ಮೀರ ದಲ್ಲಿ ಯಾರೂ ರಾಷ್ಟ್ರಧ್ವಜ ವನ್ನು ಹಾರಿಸಲಾಗದು. ಹೇಗೆ ರದ್ದು ಮಾಡುತ್ತಾರೋ ನೋಡುತ್ತೇನೆ. ಒಂದು ವೇಳೆ 370ನೇ ವಿಧಿ ರದ್ದು ಗೊಳಿ ಸಿದರೆ ಯಾರು ಭಾರತದ ರಾಷ್ಟ್ರಧ್ವಜ ಹಾರಿಸುತ್ತಾರೆ ಎಂಬುದನ್ನು ನಾನು ನೋಡಬೇಕಿದೆ. ಜನರ ಹೃದಯ ವನ್ನು ಗೆಲ್ಲುವಂಥ ಕೆಲಸ ಮಾಡಿ. ಹೃದಯ ಒಡೆಯಬೇಡಿ.
– ಫಾರೂಕ್‌ ಅಬ್ದುಲ್ಲ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.