BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ನಿಂದನೆ ಬಗ್ಗೆ ಭಾರೀ ಗದ್ದಲ, ರಾಜನಾಥ್ ಸಿಂಗ್ ವಿಷಾದ, ಪಕ್ಷದಿಂದ ಶೋಕಾಸ್ ನೋಟಿಸ್

Team Udayavani, Sep 22, 2023, 4:10 PM IST

1-saasds

ಹೊಸದಿಲ್ಲಿ: ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಸಂಸತ್ತಿನಲ್ಲಿ ಅಸಂಸದೀಯ ಪದಗಳನ್ನು ಬಳಸಿ ಕೋಮು ಪ್ರಚೋದಕ ಹೇಳಿಕೆಗಳನ್ನು ನೀಡುವ ಮೂಲಕ ಭಾರೀ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು “ಕಠಿಣ ಕ್ರಮ”ದ ಎಚ್ಚರಿಕೆಯನ್ನು ನೀಡಿದ್ದಾರೆ.ಮಾತ್ರವಲ್ಲದೆ ಹೇಳಿಕೆ ಗಳನ್ನು ದಾಖಲೆಗಳಿಂದ ತೆಗೆದು ಹಾಕಲಾಗಿದೆ.

ಲೋಕಸಭೆಯಲ್ಲಿ “ಚಂದ್ರಯಾನದ ಯಶಸ್ಸು” ಕುರಿತು ಚರ್ಚೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ಅವರ ವಿರುದ್ಧ ರಮೇಶ್ ಬಿಧುರಿ ಬಳಸಿದ ಆಕ್ಷೇಪಾರ್ಹ ಪದಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂತಹ ವರ್ತನೆಯನ್ನು ಪುನರಾವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಬಿಧುರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪಕ್ಷಗಳ ನಾಯಕರು ಬಿಜೆಪಿ ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದು, ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಲ್ಪ ಸಮಯದ ನಂತರ ಸದನದಲ್ಲಿ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. “ಟೀಕೆಗಳಿಂದ ಪ್ರತಿಪಕ್ಷಗಳಿಗೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ರಕ್ಷಣಾ ಸಚಿವರು ಹೇಳಿದ್ದಾರೆ. ಕ್ಷಮೆಯಾಚನೆ ಸಾಕಾಗುವುದಿಲ್ಲ, ಬಿಧುರಿ ಅವರನ್ನು ಅಮಾನತುಗೊಳಿಸಬೇಕು ಅಥವಾ ಬಂಧಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

“ಇದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ರಾಜನಾಥ್ ಸಿಂಗ್ ಅವರ ಕ್ಷಮೆಯಾಚನೆ ಸ್ವೀಕಾರಾರ್ಹವಲ್ಲ ಮತ್ತು ಅರೆಮನಸ್ಸಿನದು. ಇದು ಸಂಸತ್ತಿಗೆ ಮಾಡಿದ ಅವಮಾನ, ಬಿಧುರಿ ಹೇಳಿಕೆ ಪ್ರತಿಯೊಬ್ಬ ಭಾರತೀಯನಿಗೂ ಅವಮಾನವಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆಕ್ರೋಶ ಹೊರ ಹಾಕಿ ಬಿಜೆಪಿ ನಾಯಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಹಿಂದೆ ಸಂಸತ್ತಿನ ಹೊರಗೆ ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿತ್ತು, ಆದರೆ ನಿನ್ನೆ ಸಂಸತ್ತಿನ ಒಳಗೆ, ಲೋಕಸಭೆಯ ನೆಲದ ಮೇಲೆ ಬಿಜೆಪಿ ಸಂಸದರೊಬ್ಬರು ದ್ವೇಷದ ಭಾಷಣ ಮಾಡಿದ್ದಾರೆ ಎಂದು ಡ್ಯಾನಿಶ್ ಅಲಿ ಅವರು ಪ್ರತಿಕ್ರಿಯಿಸಿದ್ದಾರೆ.

ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ಬಿಧುರಿ ಅವರಿಗೆ ಬಿಜೆಪಿ ಶುಕ್ರವಾರ ಶೋಕಾಸ್ ನೋಟಿಸ್ ನೀಡಿದೆ. ಡ್ಯಾನಿಶ್ ಅಲಿ ವಿರುದ್ಧ ಬಿಧುರಿ ಅವರು ‘ಉಗ್ರವಾದಿ’ ಸೇರಿ ಕೆಲ ಅಸಂಸದೀಯ ಪದಗಳನ್ನು ಬಳಸಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.