ದೆಹಲಿ ವಿಧಾನಸಭೆ; ಬಿಜೆಪಿಯ ರಾಮ್ ವೀರ್ ಸಿಂಗ್ ವಿರೋಧ ಪಕ್ಷದ ನಾಯಕ
ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಎಂಟು ಸ್ಥಾನಗಳಲ್ಲಿ ಜಯಗಳಿಸಿತ್ತು.
Team Udayavani, Feb 24, 2020, 6:50 PM IST
ನವದೆಹಲಿ: ದೆಹಲಿ ವಿಧಾನಸಭಾ ವಿರೋಧ ಪಕ್ಷದ ನಾಯಕನನ್ನಾಗಿ ಭಾರತೀಯ ಜನತಾ ಪಕ್ಷದ ಬಾದಾರ್ಪುರ್ ಕ್ಷೇತ್ರದ ಶಾಸಕ ರಾಮ್ ವೀರ್ ಸಿಂಗ್ ಭಿದುರಿಯನ್ನು ಆಯ್ಕೆ ಮಾಡಲಾಗಿದೆ. ಸಿಂಗ್ ಬಾದಾರ್ಪುರ್ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಸೋಮವಾರ ಬಿಜೆಪಿ ನಡೆಸಿದ ಸಭೆಯಲ್ಲಿ ರಾಮ್ ವೀರ್ ಸಿಂಗ್ ಭಿದುರಿಯನ್ನು ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರದಲ್ಲಿ ತಿಳಿಸಿದ್ದಾರೆ.
ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಎಂಟು ಸ್ಥಾನಗಳಲ್ಲಿ ಜಯಗಳಿಸಿತ್ತು. 70 ವಿಧಾನಸಭಾ ಸ್ಥಾನ ಹೊಂದಿರುವ ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳಲ್ಲಿ ಜಯಗಳಿಸಿ ಪ್ರಚಂಡ ಬಹುಮತ ಪಡೆದು ಸರ್ಕಾರ ರಚಿಸಿತ್ತು. ಅರವಿಂದ್ ಕೇಜ್ರಿವಾಲ್ ದೆಹಲಿ ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್