ವಿವಾಹಿತೆಯ ಅತ್ಯಾಚಾರ, ಕೊಲೆ: ಸರೋವರದ ಬಳಿ ನಗ್ನದೇಹ ಪತ್ತೆ
Team Udayavani, Aug 28, 2018, 4:08 PM IST
ಕೋಲ್ಕತ : 24 ದಕ್ಷಿಣ ಪರಗಣದ ಕುಲ್ಪಿ ಬ್ಲಾಕ್ ನಲ್ಲಿ ನಿನ್ನೆ ಸೋಮವಾರ ರಾತ್ರಿ ಕೊಳವೊಂದರ ಸಮೀಪ 35ರ ಹರೆಯದ ವಿವಾಹಿತೆಯ ನಗ್ನ ಮೃತ ಶರೀರ ಪತ್ತೆಯಾಗಿದೆ. ಇದು ಅತ್ಯಾಚಾರ ಅಥವಾ ವಿವಾಹೇತರ ಸಂಬಂಧದ ಫಲವಾಗಿ ನಡೆದಿರುವ ಕೊಲೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಮಹಿಳೆಯ ದೇಹದ ಮೇಲೆ ಚಿತ್ರಹಿಂಸೆಯಿಂದ ಉಂಟಾದ ಗಾಯದ ಗುರುತುಗಳು ಕಂಡುಬಂದಿವೆ; ಆಕೆ ತೊಟ್ಟಿದ್ದ ಚಿನ್ನಾಭರಣಗಳೆಲ್ಲ ನಾಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ರುನಾ ಲೈಲಾ ಖಾನ್ ಎಂದು ಗುರುತಿಸಲಾಗಿದೆ. ಈಕೆ ತನ್ನ ಗಂಡನೊಂದಿಗೆ ಕುಲ್ಪಿ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕುಚುಬೇರಿಯ ಗ್ರಾಮದ ಕರೀಂಪುರ್ ಹ್ಯಾಟ್ ಪ್ರದೇಶದಲ್ಲಿ ವಾಸವಾಗಿದ್ದಳು. ಈಕೆ ಪ್ರತೀ ನಿತ್ಯ ಮಧ್ಯಾಹ್ನ ತನ್ನ ಹಳ್ಳಿ ಮನೆಗೆ ಹೋಗುತ್ತಿದ್ದಳು ಎಂದು ಆಕೆಯ ಪತಿ ಹೇಳಿದ್ದಾರೆ.
ಸೋಮವಾರ ಮಧ್ಯಾಹ್ನ ಹಾಗೆ ಹೋದವಳು ರಾತ್ರಿಯಾದರೂ ಮನೆಗೆ ಬರಲಿಲ್ಲ. ಹುಡುಕಾಡ ತೊಡಗಿದ ಗಂಡನನಿಗೆ ಆಕೆಯ ಶವ ಕೊಳದ ಸಮೀಪ ಕಂಡು ಬಂತು. ಅಂತೆಯೇ ಆತ ಪೊಲೀಸರಿಗೆ ದೂರು ನೀಡಿದ್ದು ಅವರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ