ರೇಷನ್ ಕಾರ್ಡ್ ಇರುವ ಪ್ರತೀ ಗೃಹಿಣಿಗೂ ತಿಂಗಳಿಗೆ 1000 ರೂ : ಸ್ಟಾಲಿನ್
ಪ್ರತೀ ಗೃಹಿಣಿಗೂ ತಿಂಗಳಿಗೆ 1000 ರೂ
Team Udayavani, Mar 7, 2021, 10:15 PM IST
ಚೆನ್ನೈ : ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ, ಕಾಂಗ್ರೆಸ್ ಮತ್ತು ವಿಸಿಕೆ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಇದೇ ಬೆನ್ನಲ್ಲೇ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಇಂದು ತಿರುಚ್ಚಿಯಲ್ಲಿ ಬೃಹತ್ ರ್ಯಾಲಿ ನಡೆಸಿ ತಮಿಳುನಾಡು ಮಿಷನ್ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
ಭಾಷಣದಲ್ಲಿ ಮಾತನಾಡಿರುವ ಸ್ಟಾಲಿನ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ವರ್ಷ ಹತ್ತು ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುತ್ತದೆ. ಮುಂದಿನ ಹತ್ತು ವರ್ಷಗಳಲ್ಲಿ ತಮಿಳುನಾಡಿನ ಒಂದು ಕೋಟಿ ಜನರನ್ನು ಬಡತನದಿಂದ ಮುಕ್ತರನ್ನಾಗಿಸುತ್ತೇವೆ ಎಂದಿದ್ದಾರೆ.
ಇದೇ ವೇದಿಕೆಯಲ್ಲಿ ಮಾತನಾಡಿದ ಸ್ಟಾಲಿನ್, ನೀವು ನಮ್ಮನ್ನು ಗೆಲ್ಲಿಸಿದರೆ ರೇಷನ್ ಕಾರ್ಡ್ ಹೊಂದಿರುವ ಪ್ರತೀ ಮನೆಯ ಗೃಹಿಣಿಯರಿಗೆ ಪ್ರತೀ ತಿಂಗಳು 1000 ರೂ. ಹಣವನ್ನು ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ರಾಜ್ಯದ ಆದಾಯವನ್ನು ದ್ವಿಗುಣಗೊಳಿಸುವುದೇ ನಮ್ಮ ಟಾರ್ಗೆಟ್ ಎಂದಿದ್ದಾರೆ. ಹಾಗೂ ರಾಜ್ಯದ ಜನರ ತಲಾ ಆದಾಯವನ್ನು ನಾಲ್ಕು ಲಕ್ಷಕ್ಕೆ ಏರಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್