ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ: ಬಾಲಿವುಡ್ ಸೂಪರ್ ಸ್ಟಾರ್ ಪುತ್ರ ಸೇರಿ 10 ಮಂದಿ ವಶಕ್ಕೆ
Team Udayavani, Oct 3, 2021, 8:37 AM IST
ಮುಂಬೈ: ಮುಂಬೈ ಕರಾವಳಿ ತೀರದಲ್ಲಿ ಕ್ರೂಸ್ ಶಿಪ್ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಗೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಒಬ್ಬರ ಪುತ್ರನೂ ಸೇರಿದ್ದಾನೆ ಎನ್ನಲಾಗಿದೆ.
ದಾಳಿಯ ವೇಳೆ ಅಧಿಕಾರಿಗಳು ಕೊಕೇನ್, ಹಶೀಶ್ ಹಾಗೂ ಎಂಡಿಎಂಎ ಸೇರಿ ಹಲವು ರೀತಿಯ ನಿಷೇಧಿತ ಮಾದಕ ದ್ರವ್ಯಗಳು ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಾರ್ಡೆಲಿಯಾ ಕ್ರೂಸ್ ಲೈನರ್ ಎಂಪ್ರೆಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿದ್ದವರು ಡ್ರಗ್ಸ್ ಸೇವಿಸುತ್ತಿದ್ದರು. ಎನ್ಸಿಬಿ ಅಧಿಕಾರಿಗಳು ಬಾಂಬೆಯಿಂದ ಪ್ರಯಾಣಿಕರಂತೆ ಹಡಗು ಹತ್ತಿದ್ದರು.
ಇದನ್ನೂ ಓದಿ:ದೀದಿ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ
ಹಡಗು ಮುಂಬೈ ತೀರದಿಂದ ಹೊರಟು ಸಮುದ್ರವನ್ನು ತಲುಪಿದ ನಂತರ ರೇವ್ ಪಾರ್ಟಿ ಆರಂಭವಾಗಿದೆ. ಪಾರ್ಟಿ ಆರಂಭವಾಗುತ್ತಿದ್ದಂತೆ ಹಡಗಿನಲ್ಲಿದ್ದ ಎನ್ ಸಿಬಿ ಅಧಿಕಾರಿಗಳು ತಕ್ಷಣ ದಾಳಿ ನಡೆಸಿದರು ಮತ್ತು ಬಹಿರಂಗವಾಗಿ ಅಕ್ರಮ ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದ ಹಲವರನ್ನು ಬಂಧಿಸಿದ್ದಾರೆ.
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 10 ಮಂದಿಯನ್ನು ಎನ್ ಸಿಬಿ ಬಂಧಿಸಿದೆ ಎನ್ನಲಾಗಿದೆ. ಬಂಧಿತರನ್ನು ಇದೀಗ ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ