ಬ್ಯಾಂಕ್ಗಳು ಶೀಘ್ರ ಬಡ್ಡಿ ದರ ಇಳಿಸಲಿ: ಆರ್ಬಿಐ ಗವರ್ನರ್
Team Udayavani, Jul 9, 2019, 5:40 AM IST
ಹೊಸದಿಲ್ಲಿ: ರೆಪೋ ದರವನ್ನು ಇಳಿಕೆ ಮಾಡುತ್ತಿದ್ದಂತೆ ಬ್ಯಾಂಕ್ಗಳು ತ್ವರಿತವಾಗಿ ಕ್ರಮ ಕೈಗೊಂಡು ತಮ್ಮ ಗ್ರಾಹಕರ ಗೃಹ, ವಾಹನ ಹಾಗೂ ವೈಯಕ್ತಿಕ ಸಾಲದ ಬಡ್ಡಿ ದರವನ್ನೂ ಕಡಿಮೆ ಮಾಡಬೇಕು ಎಂದು ಆರ್ಬಿಐ ಸೂಚಿಸಿದೆ. ಈ ವಿತ್ತ ವರ್ಷದಲ್ಲಿ ಮೂರು ಬಾರಿ ಆರ್ಬಿಐ ರೆಪೋ ದರ ಇಳಿಕೆ ಮಾಡಿದ್ದು, ಒಟ್ಟಾರೆ ಶೇ. 0.75 ಇಳಿಕೆಯಾಗಿದೆ.
ಬಜೆಟ್ ಅನಂತರದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸೋಮವಾರ ಸಭೆ ನಡೆಸಿದರು. ಜೂನ್ 6ರಂದು 50 ಮೂಲಾಂಶ ಬಡ್ಡಿ ರೆಪೋ ದರ ಇಳಿಕೆ ಮಾಡಲಾಗಿದೆ. ಆದರೆ ಇದರಲ್ಲಿ ಕೇವಲ 21 ಮೂಲಾಂಶವನ್ನು ಮಾತ್ರ ಗ್ರಾಹಕರಿಗೆ ವರ್ಗಾವಣೆ ಮಾಡಲಾಗಿದೆ. ಒಂದು ಸಮಾಧಾನದ ಸಂಗತಿಯೆಂದರೆ, ಈಗ ಈ ಬದಲಾವಣೆ ಕೆಲವೇ ತಿಂಗಳಲ್ಲಿ ನಡೆಯುತ್ತಿದೆ. ಈ ಹಿಂದೆ ಇದು ಆರು ತಿಂಗಳುಗಳ ಕಾಲ ತೆಗೆದುಕೊಳ್ಳುತ್ತಿತ್ತು ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ದೇಶದಲ್ಲಿ ಸೂಕ್ತ ಆರ್ಥಿಕ ದ್ರವ್ಯತೆ ಇದೆ. ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಸಮಸ್ಯೆಯನ್ನು ನಾವು ಗಮನಿಸುತ್ತಿದ್ದೇವೆ. ಅಲ್ಲದೆ, ಸಾಗರೋತ್ತರ ಬಾಂಡ್ಗಳನ್ನು ಬಿಡುಗಡೆ ಮಾಡುವ ಕುರಿತೂ ಚರ್ಚೆ ನಡೆಸಲಾಗುತ್ತದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!