ರಾಷ್ಟ್ರಪತಿ ಕಾರಿಗೂ ನೋಂದಣಿ
Team Udayavani, Jan 7, 2018, 6:40 AM IST
ಹೊಸದಿಲ್ಲಿ: ವಿಐಪಿ ವಾಹನಗಳಿಗೆ ಕೆಂಪು ದೀಪ ಅಳವಡಿಕೆಗೆ ಮಾರ್ಗಸೂಚಿಯನ್ನು ಕಳೆದ ವರ್ಷ ಹೊರಡಿಸಿದ್ದ ಕೇಂದ್ರ ಸರಕಾರ, ವಿಐಪಿ ಸಂಸ್ಕೃತಿಯನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇನ್ನೊಂದು ಮಹತ್ವದ ಹೆಜ್ಜೆಯಿಟ್ಟಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಉಪರಾಜ್ಯಪಾಲರ ವಾಹನಗಳಿಗೂ ನಂಬರ್ ಪ್ಲೇಟ್‌ಗಳನ್ನು ಅಳವಡಿಸಬೇಕು ಎಂದು ಸೂಚನೆ ಹೊರಡಿಸಿದೆ.
ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ವಾಹನದಲ್ಲಿ ನಂಬರ್ ಪ್ಲೇಟ್ ಪ್ರದರ್ಶನಗೊಳ್ಳುವಂತೆ ನೋಡಿಕೊಂಡಿದ್ದಾರೆ. ಪ್ರಧಾನಿ ಕಾರಿಗೆ ಈಗಾಗಲೇ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ.
ಸದ್ಯ ಈ ಗಣ್ಯರ ವಾಹನಗಳ ಮೇಲೆ ಹಾಗೂ ಇವರ ಬೆಂಗಾವಲು ಪಡೆಯಲ್ಲಿರುವ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಪ್ರದರ್ಶಿಸುವುದಿಲ್ಲ. ಬದಲಿಗೆ ನಂಬರ್ ಪ್ಲೇಟ್ ಅಳವಡಿಸುವ ಸ್ಥಳದಲ್ಲಿ ಅಶೋಕ ಸ್ತಂಭ ಚಿಹ್ನೆ ಇರುತ್ತದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಇತ್ತೀಚೆಗೆ ದೂರೊಂದು ದಾಖಲಾಗಿತ್ತು. ನಂಬರ್ ಪ್ಲೇಟ್ ಪ್ರದರ್ಶಿಸದಿರುವ ಈ ಕ್ರಮ 1988ರ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ವಾದಿಸಲಾಗಿತ್ತು. ಈ ಕುರಿತು ನ್ಯಾಯಾಲಯವು ಕೇಂದ್ರ ಸರಕಾರದ ಪ್ರತಿಕ್ರಿಯೆ ಕೋರಿತ್ತು. ಈ ಹಿನ್ನೆಲೆಯಲ್ಲಿ ಜನವರಿ 2 ರಂದೇ ಸಂಬಂಧಿತ ಇಲಾಖೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ